ಧಾರವಾಡ ಜಿಲ್ಲೆಯ ಉಪ್ಪಿನಬೆಟಗೇರಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕೂಲಿ ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗೆ ಆರೋಗ್ಯ ಅಮೃತ ಅಭಿಯಾನದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮನರೇಗಾ ಕೂಲಿ ಕಾರ್ಮಿಕರು ಮತ್ತು ಹಿರಿಯ ನಾಗರಿಕರಿಗಾಗಿ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ 200ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪ್ರಿಯಾಂಕಾ ಚವ್ಹಾಣ ಮಾತನಾಡಿ, “ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡವನ್ನು ನಿಯಂತ್ರಣ ಮಾಡಿ ದೇಹವನ್ನು ಅನಾರೋಗ್ಯದಿಂದ ಕಾಪಾಡಬೇಕು. ಆರೋಗ್ಯವಂತ ಶರೀರಕ್ಕೆ ಪೌಷ್ಟಿಕಾಂಶವುಳ್ಳ ಆಹಾರ ಹಾಗೂ ದಿನನಿತ್ಯ ಯೋಗ, ವ್ಯಾಯಾಮ ಮಾಡುತ್ತಿರಬೇಕು” ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಬೆಳೆ ನಾಶ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ