ಧಾರವಾಡ | ಮಾಜಿ ಸೈನಿಕರ ಕುಟುಂಬ ಸದಸ್ಯರಿಗಾಗಿ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ

Date:

ನಮ್ಮ ದೇಶದ ವೀರ ಸೈನಿಕರು ತ್ಯಾಗಜೀವಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ಕಾಪಾಡುತ್ತಿದ್ದಾರೆ. ಅವರ ಕುಟುಂಬದ ಸದಸ್ಯರು ಕಾನೂನಿನ ತೊಡಕಿನಲ್ಲಿ ಸಿಲುಕಿ ತೊಂದರೆ ಅನುಭವಿಸಬಾರದು. ಅವರಿಗೆ ಕಾನೂನಿನ ಅರಿವು ಮೂಡಿಸುವುದು ಮತ್ತು ಕಾನೂನಿನ ನೆರವು ನೀಡುವುದಕ್ಕಾಗಿಯೇ ಉಚಿತ ಕಾನೂನು ಸೇವೆಗಳ ಕ್ಲಿನಿಕ್‍ಗಳನ್ನು ಪ್ರಾರಂಭಿಸಲಾಗಿದೆ ಎಂದು ಭಾರತಿ.ಬಿ.ಎಸ್ ಹೇಳಿದರು.

- Advertisement -

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ ಹಾಗೂ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಸಹಯೋಗದಲ್ಲಿ ಸೆ. 15ರಂದು ಧಾರವಾಡದ ಡಿ.ಸಿ.ಕಂಪೌಂಡಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಮುನರ್ವಸತಿ ಇಲಾಖೆಯ ಆವರಣದಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ವೀರ ಪರಿವಾರ ಸಹಾಯ ಯೋಜನೆ-2025 ಅಡಿಯಲ್ಲಿ ಉಚಿತ ಕಾನೂನು ಸೇವೆಗಳ ಕ್ಲಿನಿಕ್‍ಗಳ ವರ್ಚುವಲ್ ಉದ್ಘಾಟನೆ ಸಮಾರಂಭವನ್ನು ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಭಾರತಿ.ಬಿ.ಎಸ್. ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಪ್ರತಿ ಪೊಲೀಸ್ ಪೇದೆಯು ಜನಪರ, ಜನಸ್ನೇಹಿ ಆಗಬೇಕು: ಆಲೋಕ್ ಕುಮಾರ್

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ. ಎಫ್ .ದೊಡ್ಡಮನಿ, ಮಾಜಿ ಸೈನಿಕರು, ಅವರ ಕುಟುಂಬದವರು ಹಾಗೂ ಇಲಾಖೆಯ ಸಿಬ್ಬಂದಿಯವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...