ಧಾರವಾಡ | ಮಹಿಳೆಯರು, ಶೋಷಿತರಿಗೆ ನ್ಯಾಯ ದೊರೆತಾಗ ಸ್ವಾತಂತ್ರ್ಯಕ್ಕೆ ಅರ್ಥಬರುತ್ತದೆ: ಎ.ಎಸ್. ಬಳ್ಳಾರಿ

Date:

ಮಹಿಳೆಯರು, ದಲಿತರು, ಮಕ್ಕಳು ಹಾಗೂ ಶೋಷಿತ ವರ್ಗದವರಿಗೆ ನ್ಯಾಯ ದೊರೆತಾಗ ಮಾತ್ರ ನಿಜವಾದ ಸ್ವಾತಂತ್ರ್ಯಕ್ಕೆ ಅರ್ಥಬರುತ್ತದೆ ಎಂದು ಅಂಜುಮನ್ ಕಾಲೇಜಿನಲ್ಲಿ ಏರ್ಪಡಿಸಿದ್ದ “ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ. ಎ.ಎಸ್. ಬಳ್ಳಾರಿ ಉಪನ್ಯಾಸ ನೀಡಿದರು.

- Advertisement -

ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ, ಧಾರವಾಡದ, ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ, ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಎನ್.ಎಸ್.ಎಸ್ ಘಟಕ 1 ಮತ್ತು 2ರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ದೊರೆಯಬೇಕು. ನ್ಯಾಯವನ್ನು ಪಡೆಯಲು ಇರುವ ವಿವಿಧ ಅವಕಾಶಗಳ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ ಎಂದು ಕಾನೂನು ಸೇವೆಗಳ ಮಹತ್ವವನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಐಕ್ಯೂಎಸಿ ಸಂಯೋಜಕ ಡಾ. ಎನ್.ಬಿ. ನಾಲತವಾಡ ಮಾತನಾಡಿ, ಸಮಾಜದ ದುರ್ಬಲ ವರ್ಗದವರು, ಮಹಿಳೆಯರು, ಕಾರ್ಮಿಕರು ಹಾಗೂ ಶೋಷಣೆಗೆ ಒಳಗಾದ ಸಂತ್ರಸ್ತರಿಗೆ ಉಚಿತ ಕಾನೂನು ಸೇವೆಗಳನ್ನು ಒದಗಿಸುವ ಮೂಲಕ ವ್ಯಕ್ತಿಗೌರವವನ್ನು ಕಾಪಾಡುವಂತೆ ಕರೆ ನೀಡಿದರು. ಉಚಿತ ಕಾನೂನು ಸೇವೆಗಳನ್ನು ಪಡೆಯಲು ಕಾನೂನು ಸೇವಾ ಕೇಂದ್ರಗಳನ್ನು ಸಂಪರ್ಕಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಇದನ್ನೂ ಓದಿ ಧಾರವಾಡ | ಟಿಪ್ಪು ಸುಲ್ತಾನ್ ಯಾವತ್ತೂ ಬ್ರಿಟೀಷರಿಗೆ ಗುಲಾಮನಾಗಿ ಬದುಕಲಿಲ್ಲ: ಪ್ರಮೀಳಾ ಮೇಟಿ

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನಾಗರಾಜ ಕನಕನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಎಸ್.ಕೆ. ಜಾಧವ್ (ಶಿಕ್ಷಣ ವಿಭಾಗದ ಮುಖ್ಯಸ್ಥರು) ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸವಿತಾ ವಾಲಿಕರ ವಂದಿಸಿದರು. ಉರ್ದು ವಿಭಾಗದ ಮುಖ್ಯಸ್ಥೆ ಡಾ. ಬಿಬಿಆಯಿಶಾ ಚಕೋಲಿ, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...