ನವೆಂಬರ 16 ರಿಂದ 18, 2024 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಮತ್ತು ಫಲ-ಪುಷ್ಪ ಪ್ರದರ್ಶನ ಸಮಿತಿ, ಜಿಲ್ಲಾ ಹಾಪ್ ಕಾಮ್ಸ್, ಹುಬ್ಬಳ್ಳಿಯ ಸ್ವರ್ಣ ಟೆಕ್ನೋ ಕನ್ಸ್ಟ್ರಕ್ಷನ್ ಪ್ರೈ.ಲಿ. ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಫಲ-ಪುಷ್ಪ ಪ್ರದರ್ಶನವನ್ನು ಆಯೋಜಿಸಿದ್ದಾರೆ.
3ದಿನ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ಸಂಘ ಸಂಸ್ಥೆಗಳು, ರೈತರು ಮತ್ತು ಸಾರ್ವಜನಿಕರು ತೋಟಗಾರಿಕೆ ಬೆಳೆಗಳು, ಹೂಗಳು ಮತ್ತು ಅಲಂಕಾರಿಕ ಗಿಡಗಳ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಈ ವರದಿ ಓದಿದ್ದೀರಾ? ಬೆಳಗಾವಿ | ಬಾಲ ರಾಮನ ಮೂಲಕ ಭಾವೈಕ್ಯತೆ ಮೆರೆದ ರಂಜಾನ್ ಸಾಬ್
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2957801 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.