ಧಾರವಾಡ | ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರ: ಸಿ. ಆರ್. ಜೋಶಿ

Date:

ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರರು. ತಮ್ಮ ಕಾದಂಬರಿಗಳ ಮೂಲಕ ನಾಡಿನಾದ್ಯಂತ ಸಾಹಿತ್ಯ ಪ್ರಸಾರ ಮಾಡಿದರು. ಕನ್ನಡದ ಬರವಣಿಗೆಯ ಮೂಲಕ ಭಾಷಾ ಜಾಗೃತಿ ಮೂಡಿಸಿದರು ಎಂದು ನಿವೃತ್ತ ಉಪನ್ಯಸಕ ಸಿ. ಆರ್. ಜೋಶಿ ಹೇಳಿದರು.

- Advertisement -

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಕನ್ನಡ ಕಾದಂಬರಿ ಪಿತಾಮಹ ಗಳಗನಾಥರ ಹಾಗೂ ನಾ. ಶ್ರೀ. ರಾಜಪುರೋಹಿತ ಸ್ಮರಣಾರ್ಥ ಆಯೋಜಿಸಲ್ಪಟ್ಟ ದತ್ತಿ ಕಾರ್ಯಕ್ರಮದಲ್ಲಿ ಗಳಗನಾಥ ಹಾಗೂ ನಾ. ಶ್ರೀ. ರಾಜಪುರೋಹಿತ ಬದುಕು-ಬರಹ ವಿಷಯ ಕುರಿತು ಉಪನ್ಯಾಸ ನೀಡಿ, ಮಾತನಾಡುತ್ತಾ, ಮರಾಠಿ ಪ್ರಭಾವವಿದ್ದ ಆ ಕಾಲದಲ್ಲಿ ಕನ್ನಡಿಗರು ಮರಾಠಿ ಪತ್ರಿಕೆಯನ್ನು ಅನಿವಾರ‍್ಯವಾಗಿ ಓದಬೇಕಿತ್ತು. ಲೋಕಮಾನ್ಯ ಟಿಳಕ ಹಾಗೂ ಹರಿನಾರಾಯಣ ಆಪ್ಟೆಯವರ ಚಿಂತನೆಗಳಿಂದ ಪ್ರಭಾವಿತರಾದ ಗಳಗನಾಥರು ಮರಾಠಿಯಿಂದ ಆಪ್ಟೆಯವರ ಕಾದಂಬರಿ ಯಥಾವತ್ತಾಗೆ ಕನ್ನಡಕ್ಕೆ ಅನುವಾದ ಮಾಡಿ ಕನ್ನಡಿಗರಲ್ಲಿ ಓದುವ ಆಸಕ್ತಿ ಮೂಡಿಸಿದರು. ಕ.ವಿ.ವ ಸಂಘ ಕನ್ನಡ ಗ್ರಂಥಕರ್ತರಿಗೆ ಬಹುಮಾನ ನೀಡುವ ಪರಂಪರೆ ಪ್ರಾರಂಭಿಸಿದ್ದರಿಂದ ಪ್ರಭುದ್ಧ ಪದ್ಮನಯನ ಎಂಬ ತಮ್ಮ ಮೊದಲ ಕಾದಂಬರಿಯನ್ನು ಬರೆದು ೨೫ ರೂಪಾಯಿ ಬಹುಮಾನ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಗಳಗನಾಥರು ಒಟ್ಟು 24 ಕಾದಂಬರಿಗಳನ್ನು ಬರೆದು ಓದುಗರಲ್ಲಿ ಆಸಕ್ತಿ ಮೂಡಿಸಿದರು. ಶಿಕ್ಷಕರಾಗಿದ್ದ ಅವರು ‘ಸದ್ಭೋದ ಚಂದ್ರಿಕೆ’ ಪತ್ರಿಕೆಯನ್ನು ಪಾರಂಭಿಸಿದರು. ಆ ಕಾಲದಲ್ಲಿ ಆ ಪತ್ರಿಕೆಗೆ ೭ ಸಾವಿರ ಓದುಗರು ಚಂದಾದಾರರಾಗಿದ್ದರು. ಬಡತನದಲ್ಲಿ ಬೆಂದ ಅವರು ಆರ್ಥಿಕ ಸಾಲದ ಹೊರೆಯಿಂದ ಕಾದಂಬರಿಗಳನ್ನು ಬರೆಯಲಾರಂಭಿಸಿದರು. ಸಾಲದ ಹೊರೆ ಹೆಚ್ಚಾಗಿ ಈ ಸಾಲ ತೀರಿಸಲು ಸಂಚಾರಿ ಪುಸ್ತಕ ಮಾರಾಟಗಾರರಾಗಿ ಹಳ್ಳಿಯಿಂದ ಹಳ್ಳಿಗೆ, ಓಣಿಯಿಂದ ಓಣಿಗೆ ಸಂಚರಿಸಿ ಕಾದಂಬರಿ ಮಾರಾಟ ಮಾಡಿದರು. ಕೆಲವೊಮ್ಮೆ ಅವಮಾನವನ್ನೂ ಅನುಭವಿಸಿದರು.

ನಾ. ಶ್ರೀ ರಾಜಪುರೋಹಿತ ಮರಾಠಿ ಪ್ರಭಾವದ ನಡುವೆ ಕನ್ನಡ ಉಳಿಸಲು ಕನ್ನಡ ಸಾಹಿತ್ಯ ಇತಿಹಾಸ ಸಂಶೋಧನಾ ಕಾರ್ಯ ಪ್ರಾರಂಭಿಸಿದರು. ಅವರು ನಾಡು ನುಡಿಗೆ ಕೀರ್ತಿ ತಂದ ಒಬ್ಬ ಶ್ರೇಷ್ಠ ಸಂಶೋಧಕರು. ಶಿಕ್ಷಕ ವೃತ್ತಿ ಕಳೆದುಕೊಂಡ ಅವರು, ಆಲೂರ ವೆಂಕಟರಾಯರು ಪ್ರಾರಂಭಿಸಿದ ರಾಷ್ಟಿçÃಯ ಶಾಲೆಯಲ್ಲಿ ಕೆಲಕಾಲ ಶಿಕ್ಷಕರಾಗಿ ದುಡಿದರು. ಮುಂದೆ ಕರ್ನಾಟಕ ಇತಿಹಾಸ ಸಂಶೋಧನಾ ಮಂಡಳಿಯನ್ನು ಸ್ಥಾಪಿಸಿದರು.  ಇಡೀ ಕರ್ನಾಟಕದಲ್ಲಿ ಸಂಚರಿಸಿ ಶಾಸನ, ವೀರಗಲ್ಲು, ಮಾಸ್ತಿಗಲ್ಲುಗಳ ವ್ಯಾಪಕ ಸಂಶೋಧನೆ ಮಾಡಿ ಇತಿಹಾಸ ಕಟ್ಟಿಕೊಟ್ಟರು. ವಿಜಯನಗರ ಪತನಕ್ಕೆ ಕಾರಣವಾದ ಯುದ್ದ ನಡೆದ ಸ್ಥಳ ತಾಳಿಕೋಟಿ ಅಲ್ಲ, ಅದು ರಕ್ಕಸತಂಗಡಗಿ ಎಂಬುದನ್ನು ಅವಶೇಷ ಹಾಗೂ ಕುರುಹುಗಳಿಂದ ವಸ್ತುನಿಷ್ಠವಾಗಿ ಸಂಶೋಧಿಸಿದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ವಿದ್ಯಾವರ್ಧಕ ಸಂಘದ ಗೌರವ ಉಪಾಧ್ಯಕ್ಷ ಶ್ರೀನಿವಾಸ ವಾಡಪ್ಪಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಈ ಇಬ್ಬರೂ ಪ್ರಾತಃಸ್ಮರಣಿಯರ ಬದುಕು-ಬರಹ ಓದಬೇಕು. ಗಳಗನಾಥರು ಹೊಸಗನ್ನಡ ಗದ್ಯದ ಆದ್ಯರು ಎಂದು ಹೇಳಿದರು.

ವೇದಿಕೆಯಲ್ಲಿ ಹಾವೇರಿಯ ಗಳಗನಾಥ ಹಾಗೂ ನಾ. ಶ್ರೀ. ರಾಜಪುರೋಹಿತ ಟ್ರಸ್ಟ್ದ ಸದಸ್ಯರಾದ ವೆಂಕಟೇಶ ಗಳಗನಾಥ ಹಾಗೂ ಹನಮಂತಗೌಡ ಗೊಲ್ಲರ ಉಪಸ್ಥಿತರಿದ್ದರು. ಕವಿವ ಸಂಘಕ್ಕೆ ಗಳಗನಾಥ ಹಾಗೂ ರಾಜಪುರೋಹಿತ ಅವರ ಭಾವಚಿತ್ರಗಳನ್ನು ಸಮರ್ಪಿಸಿದರು.

ಇದನ್ನೂ ಓದಿ ಧಾರವಾಡ | ವಿವೇಕಾನಂದರ ವಿಚಾರಗಳು ಸಮಾಜಕ್ಕೆ ದಾರಿದೀಪ: ಮಲ್ಲಯ್ಯಸ್ವಾಮಿ ತೋಟಗಂಟಿ

ವೀರಣ್ಣ ಒಡ್ಡೀನ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಾನಂದ ಭಾವಿಕಟ್ಟಿ ನಿರೂಪಿಸಿದರು. ಡಾ. ಧನವಂತ ಹಾಜವಗೋಳ ವಂದಿಸಿದರು. ಕಾರ್ಯಕ್ರಮದಲ್ಲಿ ಎಂ. ಎಂ. ಚಿಕ್ಕಮಠ, ಸುರೇಶ ಭಂಡಾರಿ, ಶ್ರೀಕಾಂತ ಬನಸೋಳೆ, ಶ್ರೀ ಹಡಪದ, ಎಂ. ಬಿ. ಹೆಗ್ಗೇರಿ ಹಾಗೂ ಗಳಗನಾಥರ ಮತ್ತು ನಾ. ಶ್ರೀ. ರಾಜಪುರೋಹಿತರ ಅಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...