ಧಾರವಾಡ | ವಾರಕ್ಕೊಮ್ಮೆ ಬರುತ್ತಿರುವ ಕಸ ಸಂಗ್ರಹ ವಾಹನ; ರಸ್ತೆ ಬದಿಗಳಲ್ಲಿ ತುಂಬಿದ ಕಸದ ರಾಶಿ

Date:

ಧಾರವಾಡ ನಗರದ ಕೆಲವು ಬಡಾವಣೆಗಳಿಗೆ ಕಸ ಸಂಗ್ರಹ ವಾಹನಗಳು ವಾರಕ್ಕೊಮ್ಮೆ ಬರುತ್ತಿದ್ದು, ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಹೇಳತೀರದಾಗಿದೆ.

- Advertisement -

ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಬರುವುದಿಲ್ಲ. ಇಂಥ ಓಣಿ, ಪ್ರದೇಶಗಳಲ್ಲಿ ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿಯವುದು ಹೇರಳವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

“ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂಬ ಫಲಕಗಳು ನಾಮಕಾವಸ್ತೆಗೆ ಎಂಬಂತಾಗಿದೆ. ಈ ಫಲಕಗಳ ಬುಡದಲ್ಲಿಯೇ ಕಸ ಸುರಿಯುತ್ತಾರೆ. ಕಸ ವಿಲೇವಾರಿ ಘಟಕವಿರುವ ಹೊಸ ಯಲ್ಲಾಪುರ ಸುತ್ತಲಿನ ಪ್ರದೇಶಗಳ ನಿವಾಸಿಗಳು ಕಸದ ದುರ್ನಾತದ ಸಮಸ್ಯೆಯಿಂದ ನಲುಗುವಂತಾಗಿದೆ” ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

“ಮೂರು ದಿನಕ್ಕೊಮ್ಮೆಯಾದರೂ ನಿಯಮಿತವಾಗಿ ಎಲ್ಲ ಬಡಾವಣೆಗಳಲ್ಲಿ ಕಸ ಸಂಗ್ರಹ ವಾಹನ ಬರುವಂತೆ ವ್ಯವಸ್ಥೆ ಮಾಡಬೇಕು. ಬೀದಿ ಬದಿಗಳಲ್ಲಿ ಕಸ ಸುರಿಯುವುದನ್ನು ತಪ್ಪಿಸಬೇಕು” ಎಂದು  ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭಿಸಲು ಕಸಾಪ ಆಗ್ರಹ

“ಕಸ ಸಂಗ್ರಹ ವಾಹನ ಮತ್ತು ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ಆಟೊ, ಟಿಪ್ಪರ್‌ಗಳ ಖರೀದಿ ನಿಟ್ಟಿನಲ್ಲಿ ‍ಪ್ರಕ್ರಿಯೆ ನಡೆಯುತ್ತಿದೆ. ಹೊಸ ವಾಹನಗಳು ಕಸ ಸಂಗ್ರಹ, ವಿಲೇವಾರಿಯ ಬಹುಪಾಲು ಸಮಸ್ಯೆ ಪರಿಹಾರವಾಗಲಿದೆ” ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...