ಬಸವಣ್ಣವರ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಹೆಣ್ಣು ಮಕ್ಕಳು ಅರಿತುಕೊಳ್ಳಬೇಕು. ಮತ್ತು ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆಯ ಮಹಿಳಾ ಕಾಲೇಜಿನ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದರು.
ಬಸವಣ್ಣ, ಅಂಬೇಡ್ಕರ್ ಅವರು ಸಮಾಜದಲ್ಲಿ ಸಮಾನತೆಯನ್ನು ತಂದವರು. ಹಾಗೆಯೇ ಬದುಕಲು ದಾರಿ ಕಲ್ಪಿಸಿದವರು. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳ ಗೌರವವನ್ನು ಹೆಚ್ಚಿಸಿದ್ದಾರೆ. ಈಗಿನ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಅಂಬೇಡ್ಕರ್ ನೀಡಿದ ಸಂವಿಧಾನವಾಗಿದೆ. ಸಮಾಜವನ್ನು ಕಟ್ಟುವಲ್ಲಿ ಈಗಿನ ಪೀಳಿಗೆಯವರ ಜವಾಬ್ದಾರಿ ಹೆಚ್ಚಿದೆ. ರಾಜಕಾರಣದಲ್ಲಿ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿ, ದೇಶದ ಒಳ್ಳೆಯ ಪ್ರಜೆಯಾಗಿ ಬೆಳೆಯಬೇಕು ಎಂದರು.
ಇದನ್ನು ಓದಿದ್ದೀರಾ? ಧಾರವಾಡ | ಸರಕಾರಿ ಪ್ರಥಮ ದರ್ಜೆಯ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಅಡಿಗಲ್ಲು; 3.5 ಕೋಟಿ ವೆಚ್ಚದ ಕಟ್ಟಡ
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಈ ದಿನಮಾನಗಳಲ್ಲಿ ಹೆಣ್ಣು ಮಕ್ಕಳು ಸಾಧಕಿಯರಾಗಿ, ಪದವಿಯನ್ನು ಪಡೆದುಕೊಂಡು, ವಿದ್ಯಾವಂತರಾಗಿ ಸಮಾಜಕ್ಕೆ ಒಳಿತನ್ನು ಬಯಸಿ, ಉನ್ನತ ಸ್ಥಾನದಲ್ಲಿ ಕೆಲಸ ನಿರ್ವಹಿಸಬೇಕು ಎಂದರು. ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂತನ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣವಾಗುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಸ್.ಅಂಗಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.