ಧಾರವಾಡ | ಗ್ರಾಮೀಣ ಕಲಾವಿದರ ಪ್ರೋತ್ಸಾಹಿಸುವ ಸರ್ಕಾರದ ಯೋಜನೆ ಔಚಿತ್ಯಪೂರ್ಣ: ಚಂದ್ರಕಾಂತ ಬೆಲ್ಲದ

Date:

ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಈ ಒಂದು ಯೋಜನೆಯನ್ನು ಜಾರಿಗೆ ತಂದಿರುವುದು ಔಚಿತ್ಯಪೂರ್ಣವಾದದ್ದು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು.

- Advertisement -

ಡಾ.ದ.ರಾ.ಬೇಂದ್ರೆ ಭವನದಲ್ಲಿ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಏರ್ಪಡಿಸಲಾಗಿದ್ದ ‘ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮ’ವನ್ನು ಉದ್ಘಾಟಿಸಿ, ಮಾತನಾಡುತ್ತಾ ಇಂತಹ ವಿಶಿಷ್ಠ ಯೋಜನೆಗಳಿಂದ ತಳ ಸಮುದಾಯದ ಮತ್ತು ಗ್ರಾಮೀಣ ಪ್ರದೇಶದ ಜಾನಪದ ಕಲಾವಿದರುಗಳಿಗೆ ಹೆಚ್ಚೆಚ್ಚು ವೇದಿಕೆಗಳು ಲಭಿಸುತ್ತವೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿನಿರ್ದೇಶಕ ಕೆ.ಎಚ್.ಚನ್ನೂರ ಮಾತನಾಡಿ, ಜಾನಪದ ಕಲಾವಿದರು ನಮ್ಮ ನಾಡಿನ ಧ್ವನಿಯಾಗಿದ್ದಾರೆ. ನಮ್ಮ ಹಳ್ಳಿಯ ಜನಪದ ಸಂಸ್ಕಂತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಹಾಡುಗಳು, ನಮ್ಮ ಇತಿಹಾಸದ ಹೋರಾಟಗಾರರ ಶೌರ್ಯ, ಬಲಿದಾನದ ಮಹಿಮೆಯನ್ನು ಕಣ್ಣಿಗೆ ಕಟ್ಟುವಂತೆ ಸಾರುವ ಲಾವಣಿಗಳು ಮುಂದುವರೆಸಿಕೊಂಡು ಬಂದಿರುವ ಪರಂಪೆರೆಯನ್ನು ಉಳಿಸಿ ಬೆಳೆಸುವ ಮೂಲ ಆಶಯವೇ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮದ್ದಾಗಿದೆ. ಕಲಾವಿದರ ಕಲೆಯನ್ನು ಆಸ್ವಾಧಿಸುವ ಕಿವಿಯಾಗೋಣ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷ ಡಾ.ಸರಜೂ ಕಾಟ್ಕರ್ ಮಾತನಾಡಿ, ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ಪ್ರದೇಶದಲ್ಲಿಯ ಜಾನಪದ ಕಲೆಯಾದ ಸೋಲಿಗರ ಹಾಡುಗಳು ಅದ್ಭುತವಾದವು. ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಸಾಂಪ್ರದಾಯಿಕ ಕಲೆಗಳ ಮಿಶ್ರಣವಾಗಿರುವ ಅಪರೂಪದ ಕಲೆಯಾಗಿದೆ. ಅವರ ಹಾಡಿನ ಸಾಲುಗಳಿಂದ ಹಾಡಿರೇ ರಾಗಗಳ-ತೂಗಿರೇ ದೀಪಗಳ ಶೀರ್ಷಿಕೆ ಆಯ್ದುಕೊಂಡು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕವಿಗಳು ಕವಿತೆಗಳನ್ನು ರಾಗಗಳಿಗೆ ಲಯಬದ್ಧವಾಗಿ ಪೋಣಿಸಿದಾಗ ಮಾತ್ರ ಅವುಗಳು ಜನರ ಹೃದಯ ಗೆಲ್ಲುವ ಹಾಡುಗಳಾಗಲು ಸಾಧ್ಯವಾಗುತ್ತವೆ.  ಜನಪದ ಕಲಾವಿದರು ತಮ್ಮ ಲೋಕಾನುಭವದಿಂದ ಸಾಹಿತ್ಯ ನಿರ್ಮಾಣ ಮಾಡಿರುವಂತಹವುಗಳಾಗಿದ್ದವು, ಯಾರೂ ತಮ್ಮ ಗೀತೆಗಳ ಕೆಳಗೆ ತಮ್ಮ ಹೆಸರನ್ನು ಬರೆಯಲಿಲ್ಲ, ಅವುಗಳು ಜನರಿಂದ ಜನರಿಗೆ ಬಂದಂಥವುಗಳಾಗಿದ್ದವು. ಅವು ಜನಪದ ಸಾಹಿತ್ಯವಾಗಿ ಇಂದಿಗೂ ಪ್ರಸ್ತುತ ಎಂದರು.  

ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಇಮಾಮಸಾಬ ವಲ್ಲೆಪ್ಪನವರ, ಪ್ರಭು ಕುಂದರಗಿ ಹಾಗೂ ಹಿರಿಯ ಜಾನಪದ ಕಲಾವಿದೆ ಸಾವಿತ್ರಿ ಪೂಜಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕ ಮಾತನಾಡಿದರು. ಆರತಿ ದೇವಶಿಖಾಮನಿ ನಿರೂಪಿಸಿದರು. ಹಿರಿಯ ಪತ್ರಕರ್ತ ಗಣೇಶ ಕದಂ, ಸಮುದಾಯದ ಹಿರಿಯ ಕಲಾವಿದ ಬಿ.ಐ.ಈಳಗೇರ ಹಾಜರಿದ್ದರು.

ಇದನ್ನೂ ಓದಿ ಧಾರವಾಡ | ಮಕ್ಕಳ ದೂರುಗಳು ಗ್ರಾಮದ ಅಭಿವೃದ್ಧಿಗೆ ಪೂರಕ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಸಾಂಸ್ಕಂತಿಕ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಪೂಜಾರ ಮತ್ತು ವೃಂದದಿಂದ ಗೀಗೀ ಪದಗಳು, ಶರೀಫ್ ದೊಡ್ಡಮನಿ ಮತ್ತು ವೃಂದ ಹಾಗೂ ಯಕ್ಕೇರೆಪ್ಪ ನಡುವಿನಮನಿ ಮತ್ತು ವೃಂದದಿಂದ ತತ್ವಪದಗಳು, ಶ್ರೀಧರ ಭಜಂತ್ರಿ ಮತ್ತು ವೃಂದದಿಂದ ಶಹನಾಯಿ ವಾದನ, ಮಡಿವಾಳಪ್ಪ ಭಜಂತ್ರಿ ಮತ್ತು ವೃಂದದಿಂದ ವಚನ ಗಾಯನ, ಕೀರ್ತನಾ ನಾಯಕ ಮತ್ತು ವೃಂದದಿಂದ ಸುಗಮ ಸಂಗೀತ, ಅಶ್ವಿನಿ ಉಳ್ಳಿಕಾಶಿ ಮತ್ತು ವೃಂದದಿಂದ ಭಾವಗೀತಗಳ ಗಾಯನ, ಸ್ಟಿಫನ್ ಲುಂಜಳ ಮತ್ತು ವೃಂದದಿಂದ ವಾದ್ಯ ಸಂಗೀತ, ಚನ್ನಮ್ಮ ಹುಲಮನಿ ಮತ್ತು ವೃಂದದಿಂದ ಸೋಬಾನ ಹಾಡುಗಳು ಹಾಗೂ ಮಹಾಂತೇಶ ದೊಡಮನಿ ಮತ್ತು ವೃಂದದಿಂದ ಹೋರಾಟದ ಹಾಡುಗಳ ಗಾಯನ ಕಾರ್ಯಕ್ರಮ ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...