ಧಾರವಾಡ | ಗ್ರಾಪಂ ಚುನಾವಣೆ; ಗುರುಪಾದಪ್ಪ ಇಚ್ಚಂಗಿ ನೂತನ ಅಧ್ಯಕ್ಷ

Date:

ಒಟ್ಟು 11 ಸದಸ್ಯ ಬಲ ಹೊಂದಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಗ್ರಾಮ ಪಂಚಾಯತಿಯಲ್ಲಿ ಸೆ. 17ರಂದು ಚುನಾವಣೆ ನಡೆದಿದ್ದು, ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ 7 ಮತಗಳನ್ನು ಪಡೆದು ಜಯಶಾಲಿಯಾದರು. ಸುಮಿತ್ರಾಬಾಯಿ ಪ್ರಕಾಶ ಕದಂ 4 ಮತಗಳನ್ನು ಪಡೆದು ಪರಾಭವಗೊಂಡರು. ಇದರಿಂದ ಗುರುಪಾದಪ್ಪ ನಿಂಗಪ್ಪ ಇಚ್ಚಂಗಿ ಅಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಜಗದೀಶ್ ಕಮ್ಮಾರ ಘೋಷಿಸಿದರು.

- Advertisement -

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಗುರುಪಾದಪ್ಪ ಇಚ್ಚಂಗಿ ಮಾತನಾಡಿ, ಮಳಲಿ ಗ್ರಾಪಂ ವ್ಯಾಪ್ತಿಗೆ ಒಳಪಡುವ ಕುಂಕುರು, ತೀರ್ಥ ಹಾಗೂ ಮಳಲಿ ಗ್ರಾಮಗಳ ಸರ್ವ ಸದಸ್ಯರ ಸಹಕಾರದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಇದಕ್ಕೆ ಗ್ರಾಮದ ಹಿರಿಯರ ಸಹಕಾರ ಮುಖ್ಯ ಎಂದರು. ಇದೇ ವೇಳೆ ನೂತನ ಅಧ್ಯಕ್ಷರನ್ನು ಪಂಚಾಯತಿ ಆಡಳಿತ ಮಂಡಳಿ ಹಾಗೂ ಗುರು-ಹಿರಿಯರ ವತಿಯಿಂದ ಸನ್ಮಾನಿಸಿ, ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸದಸ್ಯ ಗುರುನಾಥಗೌಡ ಪಾಟೀಲ ಮಾತನಾಡಿ, ಚುನಾವಣೆಗಳು ಬರುತ್ತವೆ ಮತ್ತು ಹೋಗುತ್ತವೆ, ನಾವೆಲ್ಲ ಒಂದೇ. ಎಲ್ಲರೂ ಸೇರಿಕೊಂಡು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಲಹೆ ಪಡೆದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸೋಣ. ಮೂರೂ ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ರೂಪಿಸಲು ಪಣತೊಡೋಣ ಎಂದು ಕರೆಕೊಟ್ಟರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಪ್ರತಿ ಪೊಲೀಸ್ ಪೇದೆಯು ಜನಪರ, ಜನಸ್ನೇಹಿ ಆಗಬೇಕು: ಆಲೋಕ್ ಕುಮಾರ್

ಈ ಸಂದರ್ಭದಲ್ಲಿ ಸದಸ್ಯರಾದ ಗುರುನಾಥಗೌಡ ಬ. ಪಾಟೀಲ, ಮಂಜುನಾಥ ಗಂ. ದೊಡ್ಡಗೌಡ್ರ, ಮಾನಪ್ಪ ದ್ಯಾ. ಬಡಿಗೇರ, ಲಕ್ಷ್ಮೀ ಗು. ಕಳ್ಳಿಮನಿ, ಚನ್ನವ್ವ ಕ. ಸಂಶಿ, ಪಿಡಿಒ ನಾಗರಾಜ ಉಳ್ಳೆಸೂರ ಸೇರಿದಂತೆ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...