‌ಧಾರವಾಡ | ಧೈರ್ಯದಿಂದ ದೃಢಸಂಕಲ್ಪ ಮಾಡಿದಾಗ ಉತ್ತಮ ಸಾಧನೆ ಸಾಧ್ಯ: ಇಸ್ಮಾಯಿಲ್ ತಮಟಗಾರ್

Date:

ಜೀವನ ಆರಂಭದಲ್ಲಿ ಕಠಿಣವಾಗಿದ್ದರೂ, ಕಠಿಣ ಪರಿಶ್ರಮ, ಛಲ ಬಿಡದ ದೃಢವಾದ ಮನೋಭಾವನೆಯಿಂದ ಧೈರ್ಗಿಯವಾಗಿ ದೃಢಸಂಕಲ್ಪ ಮಾಡಿದರೆ ಉತ್ತಮ ಸಾಧನೆ ಮಾಡಬಹುದು, ಪ್ರಕಾಶಮಾನವಾದ ಬೆಳಕಿನಂತೆ ಯಶಸ್ವಿಯಾಗಬಹುದು ಎಂದು ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹೇಳಿದರು.

- Advertisement -

ಧಾರವಾಡ ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ 1

“ದಾರಿಯುದ್ದಕ್ಕೂ ಸವಾಲುಗಳನ್ನು ಸ್ವೀಕರಿಸುತ್ತಾ, ಲವಲವಿಕೆಯಿಂದ ಮುಂದಿನ ಪಯಣದತ್ತ ಹೆಜ್ಜೆ ಹಾಕುವುದೇ ಜೀವನ. ಜೀವನವು ಸಹಜವಾಗಿ ಕಷ್ಟ-ಕಾರ್ಪಣ್ಯಗಳಿಂದ ತುಂಬಿರುತ್ತದೆ. ಜೀವನ ಒಡ್ಡುವ ಸವಾಲುಗಳನ್ನು ಎದುರಿಸಲು ಸಿದ್ಧವಿಲ್ಲದಿದ್ದರೆ ಸೋಲು ಕಟ್ಟಿಟ್ಟ ಬುತ್ತಿ” ಎಂದರು.

ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹಮದ್ ಜಾಗಿರ್ದಾರ್ ಮಾತನಾಡಿ, “ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದಿನಪತ್ರಿಕೆ ಓದುವುದು ಒಂದು ಕಲೆ. ಪ್ರತಿ ಸುದ್ದಿಗಳನ್ನು ಓದುವ ಮುಂಚೆಯೇ, ಅದು ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವೇ ಎಂಬುದನ್ನು ತಿಳಿದು ಓದಬೇಕು” ಎಂದು ಹೇಳಿದರು.

“ಅಂಜುಮನ್ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಕೇವಲ ₹500 ಇರುವುದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನವಾಗಿದೆ” ಎಂದು ಬಿಎ ಸೆಕೆಂಡ್‌ ಸೆಮಿಸ್ಟರ್ ವಿದ್ಯಾರ್ಥಿನಿ ಅಲ್ಫಿಯಾ ಹಳ್ಳದಮನಿ ಸಂತಸ ವ್ಯಕ್ತಪಡಿಸಿದರು.

“ಒಂದು ತಿಂಗಳ ಕಾಲ ನುರಿತ ಶಿಕ್ಷಕರಿಂದ ಕೇವಲ 500 ರೂಪಾಯಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿದ್ದಾರೆ. ಈ ಸಂಸ್ಥೆಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ” ಎಂದು ಎಲ್ಲ ವಿದ್ಯಾರ್ಥಿಗಳು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ: ಜಿಲ್ಲಾಧಿಕಾರಿ ವೈಶಾಲಿ 

ವೇದಿಕೆಯಲ್ಲಿ ಪ್ರಾಚಾರ್ಯ ಮಕಾನದಾರ, ಪ್ರಾಧ್ಯಾಪಕ ಡಾ ರಾಹುತ್ ಉನ್ನಿಸಾ, ಪ್ರೊಫೆಸರ್ ಕಂಕಣಿ, ಡಾ ಎನ್ ಬಿ ನಾಲತವಾಡ, ಪತ್ರಿಕೋದ್ಯಮ ಮುಖ್ಯಸ್ಥ ಡಾ. ಎಸ್ ಎಸ್ ಅದೋನಿ ಸೇರಿದಂತೆ ಬಹುತೇಕ ವಿದ್ಯಾರ್ಥಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...