ಧಾರವಾಡ | ಆಲಿಕಲ್ಲು ಮಳೆ; ಕಲಘಟಗಿಯಲ್ಲಿ ಸೃಷ್ಠಿಯಾದ ಕಾಶ್ಮೀರದ ಹಿಮಪಾತ

Date:

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮಾಚಾಪುರದಲ್ಲಿ ರಸ್ತೆಗಳು ಹಾಗೂ ಮನೆಗಳ ಮೇಲೆ ಆಲಿಕಲ್ಲುಗಳು ರಾಶಿ ರಾಶಿಯಾಗಿ ಬಿದ್ದಿದ್ದು, ನೋಡುಗರಿಗೆ ಕಾಶ್ಮೀರದ ಹಿಮಪಾತದ ಅನುಭವ ನೀಡಿತು. ರಸ್ತೆಯ ತುಂಬಾ ಆಲಿಕಲ್ಲು ತುಂಬಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಭಾರಿ ಅಡಚಣೆ ಉಂಟಾಯಿತು.

- Advertisement -

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಆಲಿಕಲಗಲು ಸಮೇತವಾಗಿ ಭಾರಿ ಮಳೆಯಾಗಿದ್ದು, ಆ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನಾದ್ಯಂತ ಮಂಗಳವಾರ ಮಧ್ಯಾಹ್ನ ನಿರಂತರವಾಗಿ ಸುರಿದ ಭಾರಿ ಗಾಳಿ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರದ ವಾರದ ಸಂತೆಗೆ ತಾಲೂಕಿನಾದ್ಯಂತ ನೂರಾರು ಜನ ಆಗಮಿಸಿದ್ದರು. ಹಬ್ಬದ ದಿನಸಿ ಹಾಗೂ ತರಕಾರಿ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಮತ್ತು ವ್ಯಾಪಾರಸ್ಥರಿಗೆ ಮಧ್ಯಾಹ್ನ 3:30ಕ್ಕೆ ಶುರುವಾದ ಮಳೆ ತಣ್ಣೀರು ಎರಚಿತು. ಸಂತೆ ಅರ್ಧಕ್ಕೆ ಮೊಟಕುಗೊಂಡಿದ್ದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೀಡಾದರು.

ಈ ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ನಿರಾಸೆ ಮೂಡಿಸಿದೆ. ತಾಲೂಕಿನಾದ್ಯಂತ ಸುರಿದ ಈ ಅಪರೂಪದ ಆಲಿಕಲ್ಲು ಮಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ವಾಟ್ಸಾಪ್ ಸ್ಟೇಟಸ್ ಹಾಗೂ ಫೇಸ್‌ಬುಕ್‌ನಲ್ಲಿ ಎಲ್ಲೆಡೆ ಬಿಳಿ ಆಲಿಕಲ್ಲುಗಳ ರಾಶಿಯ ದೃಶ್ಯಗಳೇ ರಾರಾಜಿಸುತ್ತಿದ್ದು, ಕಲಘಟಗಿ ಈಗ ಕಾಶ್ಮೀರ ಎಂದು ಹೇಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...