ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೋಲಾರ ಜಿಲ್ಲೆಯ ಕೈ ಶಾಸಕರ ಜತೆ ವಿಧಾನಸೌಧದಲ್ಲಿ ಸಿಎಂ ಸಿದ್ದು ಚರ್ಚೆ
ಈ ಆಗಸ್ಟ್ 19ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ನಿರ್ದೇಶಿಸಿದ್ದಾರೆ.