ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಜೂನ್ 13 ರಂದೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜೂನ್ 12ರ ರಜೆಯನ್ನು ನಾಳೆ ಜೂ.13 ರಂದು ಸಹ ಮುಂದುವರೆಸಿ, ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿ; ವ್ಯಕ್ತಿ ಸಾವು
ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಸೂಚಿಸಲಾಗಿತ್ತು. ಮಳೆಯೂ ನಿರಂತರವಾಗಿ ಆಗುತ್ತಿರುವದರಿಂದ ಅನೇಕ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಠಿಯಿಂದ ರಜೆಯನ್ನು ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.