ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ, ವ್ಯಕ್ತಿಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.
48ವರ್ಷದ ಸಚಿನ್ ದೇಶಪಾಂಡೆ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಾಧನಕೇರಿ ಮೂಲಕ ಸಚಿನ್ ಬೇಲೂರು ಇಂಡಸ್ಟ್ರಿಯ ಕ್ರಸ್ಟ್ ಸ್ಪೆಷಾಲಿಟಿ ರೇಸಿಂಗ್ ಕಂಪನಿಯಲ್ಲಿ ಕಾರ್ಯನಿರ್ವಹಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಧಾರವಾಡ | ವರದಕ್ಷಿಣೆ ಕಿರುಕುಳ: ಗೃಹಿಣಿಯ ಕತ್ತು ಹಿಸುಕಿ ಕೊಲೆ ಆರೋಪ
ಕಂಪನಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವ್ಯಕ್ತಿ, ಹಿಟ್ ಅಂಡ್ ರನ್ ಗೆ ಬಲಿಯಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ಸಂಭವಿಸಿದ್ದು, ಮೃತ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.