ಅಪರಿಚಿತ ವಾಹನ ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ, ಹುಬ್ಬಳ್ಳಿ ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮೃತ ಬೈಕ್ ಸವಾರನ ಹೆಸರು ಇನ್ನೂ ತಿಳಿದು ಬದಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.