ಇತ್ತೀಚಿಗೆ ಧಾರವಾಡದ ರಾಹುಲಗಾಂಧಿ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಧಿಸಿದಂತೆ ಆರೋಪಿಗಳ ಪತ್ತೆಗಾಗಿ ನಗರದ ಉಪ ವಿಭಾಗದ ಎಸಿಪಿ ಪ್ರಶಾಂತ ಸಿದ್ದಣಗೌಡರ ಮತ್ತು ಶಹರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಎನ್.ಸಿ.ಕಾಡದೇವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು. ಇದೀಗ ಪ್ರಕರಣದ ಪ್ರಮುಖ ಆರೋಪಿ ಸುನೀಲ ಮುಳಗುಂದ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಸುನೀಲ್ ಗದಗ ಮೂಲದವನಾಗಿದ್ದು, ಆತನಿಂದ 6,09,000/- ರೂ ಮೌಲ್ಯದ 87 ಗ್ರಾಂ ಬಂಗಾರದ ಆಭರಣಗಳು ಮತ್ತು 36,000/- ರೂ ಮೌಲ್ಯದ 507 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 6,45,5010/- ರೂ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಇನ್ನೂ 2 ಪ್ರಕಣಗಳು ಪತ್ತೆಯಾಗಿವೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮತ್ತೋರ್ವ ಆರೋಪಿತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಮೋದಿ ಸರ್ಕಾರಕ್ಕೆ ಬೆಳಗಾವಿ ಸಮಾವೇಶದ ಬಗ್ಗೆ ಭಯ ಶುರುವಾಗಿದೆ: ಸುರ್ಜೇವಾಲ
ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ತಂಡದ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.