ಧಾರವಾಡ | ನಾನು‌ ಯಾವ ಸ್ವಾಮೀಜಿಗಳನ್ನೂ ಭೇಟಿಯಾಗಿಲ್ಲ: ಪ್ರಹ್ಲಾದ್ ಜೋಶಿ

Date:

ದಿಂಗಾಲೇಶ್ವರ ಸ್ವಾಮೀಜಿ ವಿಚಾರವಾಗಿ ನಾನು ಯಾರ ಬಳಿಯೂ ಹೋಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಶನಿವಾರ (ಮಾರ್ಚ್ 30) ಹುಬ್ಬಳ್ಳಿಯಲ್ಲಿ ಹೇಳಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು‌, “ನಾನು ಮುರುಘಾಮಠಕ್ಕಾಗಲಿ ಮತ್ತು ತಿಪಟೂರು ಷಡಕ್ಷರಿ ರುದ್ರಮುನಿ ಸ್ವಾಮೀಜಿ ಮಠಕ್ಕಾಗಲಿ, ಯಾರ ಬಳಿಯೂ ಹೋಗಿಲ್ಲ, ಯಾವುದೇ ಸ್ವಾಮೀಜಿಗಳನ್ನು ಭೇಟಿಯಾಗಿ ಮಾತನಾಡಿಲ್ಲ” ಎಂದು ತಿಳಿಸಿದರು.

ದಿಂಗಾಲೇಶ್ವರ ಶ್ರೀಗಳು ತಮಗೆ ಕ್ಷೇತ್ರ ಬದಲಾವಣೆ ಬಗ್ಗೆ ಕೊಟ್ಟ ಗಡುವು ನಾಳೆಗೆ ಮುಗಿಯುತ್ತದೆಯಲ್ಲ ಎಂಬ ಪ್ರಶ್ನೆಗೆ, ದಿಂಗಾಲೇಶ್ವರ ಶ್ರೀಗಳು ನೀಡಿದ ಗಡುವು ಮುಗಿದಮೇಲೆ‌ ಏನಾಗುವುದೊ‌ ಕಾದುನೋಡೋಣ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಿಂಗಾಲೇಶ್ವರ ಶ್ರೀಗಳು ಸ್ವತಂತ್ರ ಅಭ್ಯರ್ಥಿಯ ಬಗ್ಗೆ ಧಾರವಾಡ ಮುರುಘಾ ಮಠದ ಶ್ರೀಗಳು ಕೊಟ್ಟ ಪತ್ರಿಕಾ ಪ್ರಕಟಣೆ ಮತ್ತು ಮರುದಿನ ಹೇಳಿದ ಹೇಳಿಕೆ ಓದಿದ್ದೇನೆ. ಆದರೆ, ಈ ಬಗ್ಗೆ ಹೆಚ್ಚಿನದೇನು ಗೊತ್ತಿಲ್ಲ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...

ಉಡುಪಿ‌ | ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಾಯ: ಮಂಜುನಾಥ್ ಗಿಳಿಯಾರ್ 

ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ...