- ಎಸ್‌ಯುಸಿಐ ಜಿಲ್ಲಾ ಸಮಿತಿಯಿಂದ ತೀವ್ರ ಆಕ್ರೋಶ
- ಇದ್ರೀಸ್ ಪಾಷಾ ಕುಟುಂಬಕ್ಕೆ ಭದ್ರತೆ ಕಲ್ಪಿಸಲು ಆಗ್ರಹ
ಕನಕಪುರ ತಾಲೂಕಿನ ಸಾತನೂರು ಬಳಿ ಶುಕ್ರವಾರ ರಾತ್ರಿ ಜಾನುವಾರು ಸಾಗಿಸುತ್ತಿದ್ದ ಇದ್ರೀಸ್ ಪಾಷಾ ಎಂಬುವವರು ಸಂಶಯಾಸ್ಪದವಾಗಿ ಸಾವಿಗೀಡಾಗಿರುವುದನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಧಾರವಾಡ ಜಿಲ್ಲಾ ಸಮಿತಿ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಯುಸಿಐ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣವರ “ಜಾನುವಾರಗಳ ಮಾರಾಟಗಾರ ಇದ್ರೀಸ್ ಪಾಷಾ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಶೀಘ್ರ ಹಾಗೂ ನಿಷ್ಟಕ್ಷಪಾತ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.
“ಯಾವುದೇ ವ್ಯಕ್ತಿಯು ಕಾನೂನನ್ನು ಉಲ್ಲಂಘಿಸಿದಲ್ಲಿ ರಾಜ್ಯಾಂಗವು ಆತನ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕೇ ವಿನಃ ಇನ್ಯಾವುದೇ ವ್ಯಕ್ತಿಯು ಸ್ವಯಂಪ್ರೇರಿತವಾಗಿ ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಖಂಡನೀಯ” ಎಂದರು.
“ಪ್ರಕರಣದ ಎಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ಇದ್ರೀಸ್ ಪಾಷಾ ಕುಟುಂಬಕ್ಕೆ ಆರ್ಥಿಕ ನೆರವು, ಸಾಂತ್ವನ ಹಾಗೂ ಭದ್ರತೆ ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.