ಧಾರವಾಡ | ನಾರಿ ಆರೋಗ್ಯವಂತಳಾದರೆ ಕುಟುಂಬ ಆರೋಗ್ಯವಾಗಿರುತ್ತದೆ: ಎಂ ಆರ್ ಪಾಟೀಲ್

Date:

ಪ್ರತಿಯೊಬ್ಬ ನಾರಿಯು ಸದೃಢವಾಗಿದ್ದರೆ ಮತ್ತು ಆರೋಗ್ಯವಂತಳಾಗಿದ್ದರೆ ಮಾತ್ರ ಕುಟುಂಬದಲ್ಲಿ ಎಲ್ಲರೂ ಆರೋಗ್ಯವಾಗಿರುತ್ತಾರೆ. ಈ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನವು ಸದೃಢ ಕುಟುಂಬಗಳ ಮೂಲಕ ಬಲಿಷ್ಠ ಭಾರತವನ್ನು ನಿರ್ಮಿಸುವ ಗುರಿ ಹೊಂದಿದೆ ಎಂದು ಕುಂದಗೋಳ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ ಹೇಳಿದರು.

- Advertisement -

ಬುಧುವಾರ ಅ. 29ರಂದು ಪಟ್ಟಣದ ಶಿವಾನಂದ ಮಠದ ಸಭಾಭವನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆಯ ನೇತೃತ್ವದಲ್ಲಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ‘ಸ್ವಚ್ಛತಾ ಹೀ ಸೇವಾ’, ‘ಪೋಷಣ್ ಅಭಿಯಾನ’, ‘ತಂಬಾಕು ಮುಕ್ತ ಯುವ ಅಭಿಯಾನ’, ‘ಏಕ ಭಾರತ-ಶ್ರೇಷ್ಠ ಭಾರತ’ ಮತ್ತು ‘ವಿಕಸಿತ ಭಾರತ-2047’ ಸೇರಿದಂತೆ ಹಲವು ಕೇಂದ್ರ ಸರ್ಕಾರದ ಯೋಜನೆಗಳ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದು ದೇಶಾದ್ಯಂತ ಹಮ್ಮಿಕೊಂಡಿರುವ ಯೋಜನೆಯಾಗಿದೆ. ಪ್ರತಿಯೊಬ್ಬ ಮಹಿಳೆಯು ಕಾಲಕಾಲಕ್ಕೆ ಶಿಶು ಅಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಉತ್ತಮವಾದ ಪರಿವಾರವನ್ನು ನಿರ್ಮಿಸಬೇಕು. ಅವರ ಮಕ್ಕಳು ಉತ್ತಮವಾಗಿ ಬೆಳೆಯಬೇಕು ಎಂಬುದು ಸರ್ಕಾರದ ಆಶಯ. ಅಲ್ಲದೆ, ಮಕ್ಕಳು 18 ವರ್ಷ ತಲುಪಿದ ಮೇಲೆ ಶಾಲಾ ಕಾಲೇಜುಗಳಲ್ಲಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ಸಹ ಕೇಂದ್ರ ಸರ್ಕಾರ ವಿತರಿಸುತ್ತಿದ್ದು, ಯುವ ಪೀಳಿಗೆ ಇದರ ಪ್ರಯೋಜನ ಪಡೆಯಬೇಕು ಎಂಬ ಹಿತದೃಷ್ಟಿಯಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವು ಯಶಸ್ವಿಯಾಗಿ ಎಲ್ಲರಿಗೂ ತಲುಪಿದೆ ಎಂದು ನಾನು ಭಾವಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮಾ ಬಳ್ಕೊಳ್ಳಿ ಮಾತನಾಡಿ, ಯೋಜನೆಯ ರೂಪುರೇಷೆಗಳು, ಅದರ ಜಾರಿಯ ಸ್ವರೂಪ ಮತ್ತು ಮಹಿಳೆಯರು ಹಾಗೂ ಮಕ್ಕಳಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಸಂಕ್ಲೀಪೂರದ ಆದರ್ಶ ಕಲಾ ತಂಡವು ಜಾನಪದಗಳ ಪ್ರಸ್ತುತಪಡಿಸಿದರು.

ಧಾರವಾಡದ ಕೇಂದ್ರ ಸಂವಹನ ಇಲಾಖೆಯ ಕಾರ್ಯಕ್ರಮಗಳ ಸಂಯೋಜಕ ಮುರಳೀಧರ ತುಕ್ಕಪ್ಪ ಕಾರಭಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ, ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶಂಕರ ತಮ್ಮಣ್ಣವರ ಮತ್ತು ಲೀಡ್ ಬ್ಯಾಂಕ್‌ನ ಆಪ್ತ ಸಮಾಲೋಚಕ ನಿಂಗಪ್ಪ ಎನ್. ಮಡಿವಾಳರ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಕೃಷ್ಣಪ್ಪ ಲಮಾಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷ ಶ್ಯಾಮಸುಂದರ ದೇಸಾಯಿ, ಉಪಾಧ್ಯಕ್ಷ ಮಂಜುನಾಥ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕನೂರ, ತಹಶೀಲ್ದಾರ ರಾಜು ಮಾವರಕರ, ತಾಲೂಕು ಆರೋಗ್ಯ ಅಧಿಕಾರಿ ಡಾ. ರಾಜೇಂದ್ರ ಗೊಡ್ಡೆಮ್ಮಿ, ಬಿಇಒ ಮಹಾದೇವಿ ಮಾಡಲಗೇರಿ ಮತ್ತು ಪ ಪಂ ಮುಖ್ಯಾಧಿಕಾರಿ ಸಿ.ವಿ., ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಶ ಅಂಗಡಿ ಕುಲಕರ್ಣಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...