ಧಾರವಾಡ | ಚಿಟಗುಪ್ಪ ಆಸ್ಪತ್ರೆಯಲ್ಲಿ ಸೌಲಭ್ಯಗಳ ಸುಧಾರಣೆ; ರೋಗಿಗಳ ದಾಖಲಾತಿ ಹೆಚ್ಚಳ

Date:

  • ರೋಗಿಗಳ ಆರೈಕೆಗೆ ಹೆಸರುವಾಸಿಯಾಗಿರುವ ಚಿಟಗುಪ್ಪ ಆಸ್ಪತ್ರೆ
  • ನೂರಾರು ರೋಗಿಗಳು ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯುತ್ತಿದ್ದಾರೆ

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಲ್ಯಾಪ್ರೋಸ್ಕೋಪಿಕ್ ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಿದ್ದು, ಮಹಿಳೆಯ ಗರ್ಭಕೋಶದಿಂದ 1.5 ಕೆಜಿ ತೂಕದ ಗಡ್ಡೆಯನ್ನು ವೈದ್ಯರು ಹೊರತೆಗೆದಿದ್ದಾರೆ.

ಆಸ್ಪತ್ರೆಯು ಲ್ಯಾಪ್ರೋಸ್ಕೋಪಿಕ್ ಘಟಕ ಸೇರಿದಂತೆ ಸುಧಾರಿತ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿದ್ದು, ಹೆರಿಗೆಯ ಸಮಯದಲ್ಲಿ ಸಂಭವಿಸುತ್ತಿದ್ದ ತಾಯಿ ಮತ್ತು ಮಗುವಿನ ಸಾವು ಪ್ರಕರಣಗಳು ದಾಖಲಾಗಿಲ್ಲ. ವಾರ್ಷಿಕವಾಗಿ 1,800 ಸಣ್ಣ ಮತ್ತು 300 ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ.

ಚಿಟಗುಪ್ಪ ಆಸ್ಪತ್ರೆಯು ಒಳ್ಳೆಯ ಸೌಲಭ್ಯ ಹೊಂದಿರುವ ಆಸ್ಪತ್ರೆಯಾಗಿ ಗುರುತಿಸಲ್ಪಟ್ಟಿದೆ. ರೋಗಿಗಳ ಆರೈಕೆಗೆ ಹೆಸರುವಾಸಿಯಾಗಿದೆ. ರೋಗಿಗಳ ಆರೈಕೆಯಲ್ಲಿ ಅತ್ಯುನ್ನತ ಗುಣಮಟ್ಟದ ಮತ್ತು ತಾಂತ್ರಿಕವಾಗಿ ಸುಧಾರಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯೊಂದಿಗೆ, ಖಾಸಗಿ ಆಸ್ಪತ್ರೆ ಮಾದರಿಯಲ್ಲಿ ಹಲವು ಚಿಕಿತ್ಸಾ ಸೌಲಭ್ಯ ನೀಡುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನನಗೆ ಗಡ್ಡೆ ಇತ್ತು. ನಾವು ನಗರದ ಅನೇಕ ಆಸ್ಪತ್ರೆಗಳಿಗೆ ಅಲೆದಿದ್ದೇವೆ. ಆದರೆ, ಎಲ್ಲಿಯೂ ಪರಿಣಾಮಕಾರಿ ಚಿಕಿತ್ಸೆ ಸಿಗಲಿಲ್ಲ. ಚಿಟಗುಪ್ಪ ಆಸ್ಪತ್ರೆಗೆ ಬಂದ ಬಳಿಕ ವೈದ್ಯರು ಗರ್ಭಾಶಯ ಶಸ್ತ್ರಚಿಕಿತ್ಸೆ ನಡೆಸಿ, 1.5 ಕೆ.ಜಿ ಗಾತ್ರದ ಗಡ್ಡೆಯನ್ನು ತೆಗೆದಿದ್ದಾರೆ. ಹಾಗಾಗಿ ಸಿಬ್ಬಂದಿ ಮತ್ತು ಡಾ. ಶ್ರೀಧರ್ ದಂಡಪ್ಪನವರ್ ಅವರಿಗೆ ಕೃತಜ್ಞನಾಗಿದ್ದೇನೆ” ಎಂದು ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ತಿಳಿಸಿದ್ದಾರೆ.

“ಇಡೀ ಆಸ್ಪತ್ರೆ ವಾತಾವರಣವೇ ಬದಲಾಗಿದೆ. ಆಸ್ಪತ್ರೆಯ ಒಳಗೆ ಮತ್ತು ಹೊರಗೆ ನೈರ್ಮಲ್ಯದ ವಾತಾವರಣವಿದ್ದು, ರೋಗಿಗಳ ಸುರಕ್ಷತೆ ಮತ್ತು ಚಿಕಿತ್ಸೆಗೆ ಆಸ್ಪತ್ರೆ ಕಾಳಜಿ ವಹಿಸುತ್ತಿರುವುದು ಕಂಡುಬಂದಿದೆ. ಆಸ್ಪತ್ರೆ ನಿರ್ಮಿಸಿರುವ ನೈರ್ಮಲ್ಯ ವಾತಾವರಣದಿಂದ ರೋಗಿಗಳ ದಾಖಲಾತಿ ಸಂಖ್ಯೆ ಹೆಚ್ಚುತ್ತಿದೆ. ಎಚ್‌ಡಿಎಂಸಿ ನಡೆಸುತ್ತಿರುವ ಆಸ್ಪತ್ರೆಯಲ್ಲಿ ನೂರಾರು ರೋಗಿಗಳು ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಹುಬ್ಬಳ್ಳಿಯ ನಿವಾಸಿ ಬೋನಪ್ಪ ಅಂಗಡಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಕ್ತಿಕೇಂದ್ರ ವಿಧಾನಸೌಧ ಎದುರು ಬಸವಣ್ಣ-ಕೆಂಪೇಗೌಡ ಪ್ರತಿಮೆ ಅನಾವರಣ

“ಸ್ಮಾರ್ಟ್ ಸಿಟಿ ಯೋಜನೆಯಡಿ ಆಸ್ಪತ್ರೆಯನ್ನು ನವೀಕರಿಸಿ ಮೂಲಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. ಇಲ್ಲಿ ಪ್ರಮುಖ ಆಪರೇಷನ್‌ಗಳು ನಡೆದಿವೆ. ಇತ್ತೀಚೆಗೆ ಲ್ಯಾಪ್ರೋಸ್ಕೋಪಿಕ್ ಘಟಕ ಆರಂಭಿಸಿ 20 ಪ್ರಮುಖ ಆಪರೇಷನ್‌ ಮಾಡಲಾಗಿದೆ. ಮಧುಮೇಹ ಘಟಕ ಹಾಗೂ ಮಹಿಳಾ ರೋಗಿಗಳಿಗೆ ʼಪಿಂಕ್‌ ರೂಂʼ ಕೂಡ ತೆರೆಯಲಾಗಿದೆ. ಪ್ರತಿದಿನ ಸುಮಾರು 200 ರೋಗಿಗಳು ಭೇಟಿ ನೀಡಿ ಗುಣಮಟ್ಟದ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು  ಚಿಟಗುಪ್ಪ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...