ಧಾರವಾಡ | ಬ್ಯಾಂಕ್‌ ರಾಷ್ಟ್ರೀಕರಣದಲ್ಲಿ ಜಗಜೀವನರಾಮ್‌ ಪಾತ್ರ ಪ್ರಮುಖ: ಪ್ರೊ. ಪ್ರಕಾಶ ಎಸ್ ಕಾಂಬ್ಳೆ

Date:

Advertisements

ಡಾ. ಬಾಬು ಜಗಜೀವನರಾಮ್ ಅವರು ರಾಷ್ಟ್ರದ ಪ್ರಗತಿಗೆ ಒತ್ತುಕೊಡುವ ಕೊಡುವ ಮೂಲಕ ಹಲವಾರು ಸಾಮಾಜಿಕ ಚಳುವಳಿಯನ್ನು ಕಟ್ಟಿ ಹೋರಾಡಿದವರು. ಅಷ್ಟೇ ಅಲ್ಲದೇ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವುದರಲ್ಲಿಯೂ ಕೂಡ ಅವರ ಪಾತ್ರ ಪ್ರಮುಖವಾಗಿತ್ತು ಎಂದು ಕೊಲ್ಹಾಪುರದ ಶಿವಾಜಿ ವಿಶ್ವವಿದ್ಯಾಲಯ ಪ್ರೊ. ಪ್ರಕಾಶ ಎಸ್. ಕಾಂಬ್ಳೆ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ಡಾ. ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗ, ಕವಿವಿ ಧಾರವಾಡ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಮಾಲೆ, ಜ್ಞಾನ ಭಿತ್ತಿ -2 ಕಾರ್ಯಕ್ರಮಕ್ಕೆ ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ಅವರು ಆಧುನಿಕ ಭಾರತದ ಆರ್ಥಿಕ ಹಾಗೂ ಸಮಗ್ರ ಅಭಿರುದ್ಧಿಯಲ್ಲಿ ಡಾ. ಬಾಬುಜಗಜೀವನರಾಮ್ ಅವರ ಚಿಂತನೆ ಎಂಬ ವಿಷಯದ ಮೇಲೆ ಉನ್ಯಾಸ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ಅರವಿಂದ ಕವಿವಿಯ ಪಾದ್ಯಾಪಕ ಎ. ಮೂಲಿಮನಿ ಅವರು, ಡಾ. ಬಾಬು ಜಗಜೀವನರಾಮ್ ಅವರು ದೇಶದ ಆರ್ಥಿಕ ಚಿಂತನೆಯ ಮೂಲಕ ಶೋಷಿತ ಸಮುದಾಯಗಳ ಬದುಕನ್ನು ಅವಲೋಕಿಸಿ ಎಲ್ಲಾ ಕ್ಷೇತ್ರದಲ್ಲಿಯೂ ಮೀಸಲಾತಿ ದೊರೆಯಬೇಕು ಅಂದಾಗ ಮಾತ್ರ ದೇಶವನ್ನು ಒಗ್ಗೂಡಿಸಲು ಸಾಧ್ಯ ಎಂದು ಚಿಂತನೆ ಮಾಡಿದವರೆಂದು ನುಡಿದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊ. ಎಚ್. ಎಚ್. ಭರಡಿ ಅವರು ಎಲ್ಲಾ ಸಾಮಾಜಿಕ ಹೋರಾಟಗಾರರ ಚಳುವಳಿ ಮತ್ತು ಜೀವನ ಚರಿತೆಯೊಂದಿಗೆ ಡಾ. ಬಾಬು ಜಗಜೀವನರಾಮ್ ಅವರ ಬದುಕನ್ನೂ ಕೂಡ ತಿಳಿಯುವುದು ತುಂಬಾ ಅವಶ್ಯಕವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾಗಿದ್ದ ಡಾ. ಬಾಬು ಜಗಜೀವನರಾಮ್ ಅಧ್ಯಯನ ವಿಭಾಗದ ಡಾ. ಶಿವಶರಣ ಸಿ. ಟಿ, ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಪಕ ಡಾ. ಎನ್. ಎಸ್. ಮುಗದುರ, ಡಾ. ಬಾಬು ಜಗಜೀವನರಾಮ್ ಅಧ್ಯಯನ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಡಾ. ಜಯಶ್ರೀ ದೇಶಮಾನೆ ಹಾಗೂ ಸಮಾಜಸೇವಕರಾದ ಉಮಾ ಎಸ್. ಚೌಹಾಣ್ ಮತ್ತು ಕವಿವಿ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X