ಧಾರವಾಡ | ತಂತ್ರಜ್ಞಾನದ ಇಂದಿನ ಕಾಲದಲ್ಲಿ ಜನರು ಮನೆಮದ್ದುಗಳ ಕಡೆಗೆ ಗಮನ ಹರಿಸುತ್ತಿಲ್ಲ: ಪ್ರೊ. ಪಿ. ಎಲ್. ಪಾಟೀಲ

Date:

ಇಂದಿನ ತಂತ್ರಜ್ಞಾನದ ಕಾಲದಲ್ಲಿ ಜನರು ಮನೆಮದ್ದುಗಳ ಕಡೆಗೆ ಹೆಚ್ಚು ಗಮನ ಹರಿಸುತ್ತಿಲ್ಲ. ಈ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಬೇಕಾದ ಅಗತ್ಯವಿದೆ. ಭಾರತೀಯ ಕೌಟುಂಬಿಕ ವ್ಯವಸ್ಥೆಯಲ್ಲಿ ಹಿರಿಯರು ಹೇಳುವ ಅನುಭವದ ನುಡಿಗಳಲ್ಲಿ ಆರೋಗ್ಯದ ಮಹತ್ವವಿದೆ. ಈ ಸತ್ಯವನ್ನು ಅರಿತು ವಿದ್ಯಾರ್ಥಿಗಳಾದವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಎಲ್. ಪಾಟೀಲ ಹೇಳಿದರು.

- Advertisement -

ಕರ್ನಾಟಕ ವಿದ್ಯಾವರ್ಧಕ ಸಂಘದ ವಿಜ್ಞಾನ ಮತ್ತು ಆರೋಗ್ಯ ಮಂಟಪವು ಆಯೋಜಿಸಿದ್ದ ಮಂಪಟದ ಉದ್ಘಾಟನೆ ಮತ್ತು ವಿಶೇಷ ಉಪನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ, ‘ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ನಾಣ್ಣುಡಿಯನ್ನು ನೆನಪಿಸುತ್ತಾ, ಈ ಜಗತ್ತಿನಲ್ಲಿ ಆರೋಗ್ಯಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ, ವಿದ್ಯಾರ್ಥಿಗಳು ಉತ್ತಮ ಆರೋಗ್ಯವನ್ನು ಹೊಂದುವ ಮೂಲಕ ನಿಮ್ಮ ಅಭಿರುಚಿಯ ಕ್ಷೇತ್ರಗಳನ್ನು ಆಯ್ದುಕೊಂಡು ಉನ್ನತ ಮಟ್ಟದ ಸಾಧನೆಯನ್ನು ಮಾಡಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮನಗುಂಡಿಯ ಬಸವಾನಂದ ಸ್ವಾಮೀಜಿ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಎಲ್ಲ ವ್ಯಕ್ತಿಗಳ ಆರೋಗ್ಯದ ಪಾತ್ರವು ಬಹು ಮುಖ್ಯವಾಗುತ್ತದೆ. ಆರೋಗ್ಯಪೂರ್ಣ ಸಮಾಜದ ನಿರ್ಮಾಣದಲ್ಲಿ ವ್ಯಕ್ತಿಯು ದೈಹಿಕವಾಗಿ, ಮಾನಸಿಕವಾಗಿ, ಆಧಾತ್ಮಿಕವಾಗಿ ಹಾಗೂ ಸಾಮಾಜಿಕವಾಗಿ ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬೇಕಾದ ಅಗತ್ಯವಿದೆ. ವಿಶ್ವ ಆರೋಗ್ಯ ಸಂಸ್ಥೆಯು ವ್ಯಕ್ತಿಯ ಸಮಗ್ರ ಆರೋಗ್ಯದ ಪರಿಕಲ್ಪನೆಯನ್ನು ತಿಳಿಸಿದ್ದು, ಎಲ್ಲ ಮಕ್ಕಳು ಅವುಗಳನ್ನು ತಪ್ಪದೇ ಪಾಲಿಸಬೇಕು.

ಈ ಜಗತ್ತಿನಲ್ಲಿ ಜನ್ಮತಳೆದ ಯಾವ ಮಗುವು ದಡ್ಡನಲ್ಲ. ಪ್ರತಿ ಮಗುವಿನಲ್ಲೂ ಅದ್ಭುತ ಶಕ್ತಿ ಸಾಮರ್ಥ್ಯಗಳು ಅಡಕವಾಗಿರುತ್ತವೆ. ಪ್ರತಿ ಮಗು ತಮ್ಮ ನಾಲಿಗೆಯ ರುಚಿ ಬಯಸುವ ಪದಾರ್ಥಗಳಿಂದ ದೂರವಿದ್ದು ಉತ್ತಮ ಆರೋಗ್ಯವನ್ನು ಹೊಂದುವ ಮೂಲಕ ಸಮಗ್ರ ವಿಕಾಸವನ್ನು ಸಾಧಿಸಬೇಕಾಗಿದೆ. ಪ್ರತಿಯೊಬ್ಬರೂ ಬೆಳಗ್ಗೆ ಬೇಗನೇ ಏಳುವ, ಬೆಳಗ್ಗೆ ಎದ್ದು ಕೂಡಲೇ ಚಹಾದ ಬದಲಾಗಿ ನೀರು ಕುಡಿಯುವ, ಸ್ವಲ್ಪ ಶಾರೀರಿಕ ಪರಿಶ್ರಮ ಪಡುವ, ಕಾಲ ಕಾಲಕ್ಕೆ ಉತ್ತಮ ಆಹಾರ ಸೇವಿಸುವ, ಸೂಕ್ತ ಸಂದರ್ಭದಲ್ಲಿ ಉಪವಾಸ ಮಾಡುವ ಮತ್ತು ದೃಢವಾದ ಆತ್ಮವಿಶ್ವಾಸವನ್ನು ರೂಢಿಸಿಕೊಂಡು ಬೆಳೆಯಬೇಕೆಂದು ನೀಡಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ನಾವೆಲ್ಲರೂ ಉತ್ತಮ ಆಹಾರವನ್ನು ಸೇವಿಸುವ ಜೊತೆಗೆ ನಾನು ಧರಿಸುವ ಬಟ್ಟೆ, ವಾಸಿಸುವ ಮನೆ, ಬಳಸುವ ವಾಹನ ಮುಂತಾದ ವಿಷಯಗಳು ನಮ್ಮ ಸುತ್ತಮುತ್ತಲಿನ ಪರಿಸರಕ್ಕೆ ಹಾನಿ ಮಾಡದಂತಿರಬೇಕು. ಇಂದು ನಾವು ಬಳಸುತ್ತಿರುವ ಪಾಲಿಸ್ಟರ್ ಬಟ್ಟೆಗಳು ನೀರನ್ನು ಸೇರಿ ಪುನಃ ನಮ್ಮ ದೇಹವನ್ನು ಪ್ರವೇಶಿಸುತ್ತವೆ ಇದರಿಂದಾಗಿ ಮುಂದಿನ ತಲೆಮಾರು ಗಂಭೀರ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ ಎಂದರು.

ವಿಜ್ಞಾನ ಮತ್ತು ಆರೋಗ್ಯ ಮಂಟಪದ ಸಂಚಾಲಕ ಶಶಿಧರ ತೋಡಕರ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದು ವಿಜ್ಞಾನ ಮತ್ತು ತಂತ್ರಜ್ಞಾನವು ತುಂಬಾ ವೇಗವಾಗಿ ಬೆಳೆಯುತ್ತಿದ್ದು ಆ ವೇಗಕ್ಕೆ ಅನುಗುಣವಾಗಿ ನಾವು ನಮ್ಮ ಆರೋಗ್ಯದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ ಎಂದರು.

ಈ ವೇಳೆ ಪ್ರೊ. ಸಿ. ಎನ್. ಆರ್. ರಾವ್ ರಾಷ್ಟ್ರೀಯ ಶಿಕ್ಷಕ ಬಹುಮಾನ ವಿಜೇತ ಡಾ. ಲಿಂಗರಾಜ ರಾಮಾಪೂರ ಅವರನ್ನು ಸನ್ಮಾನಿಸಲಾಯಿತು. ವೇದಿಕೆ ಮೇಲೆ ಬಸವಪ್ರಭು ಹೊಸಕೇರಿ, ಶಂಕರ ಹಲಗತ್ತಿ ಉಪಸ್ಥಿತರಿದ್ದರು. ಡಾ. ಈರಣ್ಣ ಇಂಜಗನೇರಿ ಸ್ವಾಗತಿಸಿದರು. ಡಾ. ರಾಜಶೇಖರ ಬಶೆಟ್ಟಿ ವಂದಿಸಿದರು. ಚಂದ್ರಶೇಖರ ಬಶೆಟ್ಟಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳಾದ ಶಿವಾನಂದ ಭಾವಿಕಟ್ಟಿ, ಸತೀಶ ತುರುಮರಿ, ಡಾ. ಶೈಲಜಾ ಅಮರಶೆಟ್ಟಿ, ವಿಜ್ಞಾನ ಮತ್ತು ಆರೋಗ್ಯ ಮಂಟಪದ ಸಲಹಾ ಸಮಿತಿಯ ಸದಸ್ಯರು, ಆರ್. ಎಲ್. ಎಸ್. ಹಾಗೂ ಎಲ್. ಇ. ಎ. ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟ; 11 ಜನರ ಬಂಧನ, ₹24,600 ನಗದು ಜಪ್ತಿ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 6 ಮಂದಿ ಬಂಧನ

ನಗರದ ಶ್ರೀನಿವಾಸ ಸರಡಗಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ...

ಕಲಬುರಗಿ | ನ.12ರಂದು ನಗರದ ಹಲವು ಬಡಾವಣೆಗಳಲ್ಲಿ 5 ಗಂಟೆ ವಿದ್ಯುತ್ ವ್ಯತ್ಯಯ

ನಗರದ ಜಿಐಎಸ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 12ರಂದು...

ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಇನ್ನು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ; ಟಿಕೆಟ್ ದರ ಕಡಿತ

ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ...