ಧಾರವಾಡ | 4037.97 ಚ.ಮೀ ವಿಸ್ತೀರ್ಣದಲ್ಲಿ ನಿರ್ಮಾಣವಾದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ

Date:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು (ನ.07) ಬೆಳಿಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸಿದರು.

- Advertisement -

ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವು 26.00 ಗುಂಟೆ 44 ಅಣೆ (2806.06 ಚ.ಮೀ) ಕ್ಷೇತ್ರದಲ್ಲಿ ಕಟ್ಟದ ನೆಲಮಹಡಿಯು 1935.57 ಚ.ಮೀ., ಮೆಜನೈನ್ ಮಹಡಿಯು 607 ಚ.ಮೀ., ಮೊದಲನೇ ಮಹಡಿಯು 1949.00 ಚ.ಮೀ. ಹಾಗೂ ಟೇರೆಸ್ ಮಹಡಿ 153.40 ಚ.ಮೀ. ಒಟ್ಟು 4037.97 ಚ.ಮೀ ವಿಸ್ತೀರ್ಣದಲ್ಲಿ ನಿಲ್ದಾಣ ನಿರ್ಮಾಣವಾಗಿದೆ. ಈ ಯೋಜನೆಯ ಮೊತ್ತ 1311.00 ಲಕ್ಷಗಳಿದ್ದು, ಮಳೆಗಾಲ ಹೊರತುಪಡಿಸಿ 12 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬಸ್ ನಿಲ್ದಾಣದಲ್ಲಿನ ಮೂಲಭೂತ ಸೌಲಭ್ಯಗಳು: ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ವಿಶ್ರಾಂತಿ ಗೃಹ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾದ ಶೌಚಾಲಯ, ಆವರಣದ ನೆಲಗಟ್ಟಣೆ, ಕಾಂಕ್ರೀಟಿಕರಣ, ಬಸ್‍ಗಳ ನಿಲುಗಡೆಗೆ 4 ಅಂಕಣಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ (ಆರ್.ಓ ಪ್ಲಾಂಟ್), ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಮುಖ್ಯ ಕಟ್ಟಡದ ನೆಲಹಾಸಿಗೆ ಗ್ರಾನೈಟ್, ಉಪಹಾರ ಗೃಹ ಮತ್ತು ವಾಣಿಜ್ಯ ಮಳಿಗೆಗಳು, ಸಂಚಾರ ನಿಯಂತ್ರಣಾ ಕೊಠಡಿ, ಮೊದಲನೇ ಮಹಡಿಯಲ್ಲಿ ಕಛೇರಿ ಉಪಯೋಗಕ್ಕಾಗಿ ಕೊಠಡಿ, ವಿಶೇಷ ಚೇತನರಿಗೆ ಬ್ಯಾಂಪ್ ವ್ಯವಸ್ಥೆ, ಲಿಫ್ಟ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ, ಎಫ್.ಹೆಚ್.ಜಕ್ಕಪ್ಪನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...