ಭಾರತವು ‘ವೈವಿಧ್ಯತೆಯಲ್ಲಿ ಏಕತೆ’ಗೆ ನಮ್ಮ ದೇಶ ಉತ್ತಮ ಉದಾಹರಣೆಯಾಗಿದೆ ಎಂದು ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್ ತಮಾಟಗರ್ ಹೇಳಿದರು.
ನಗರದ ಅಂಜುಮನ್ ಕಾಲೇಜಿನಲ್ಲಿ ಜ. 26ರಂದು 76ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ, ಧ್ವಜಾರೋಹಣವನ್ನು ನೆರವೆರಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನವು ಹಲವು ಹಕ್ಕು ಮತ್ತು ಜವಾಬ್ದಾರಿಗಳನ್ನು ನೀಡಿದೆ. ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಆನಂದಿಸುವ ಪ್ರಜಾಪ್ರಭುತ್ವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ. ಸಮಾಜದಲ್ಲಿ ವಿಭಿನ್ನ ಜಾತಿ, ಧರ್ಮ ಅಥವಾ ಇತರ ಅನೇಕ ವಿಷಯಗಳು ನಮ್ಮನ್ನು ಪ್ರತ್ಯೇಕಿಸುತ್ತವೆ ಆದರೆ ವಿಶಾಲವಾದ ಚಿತ್ರಣದಲ್ಲಿ ನಾವೆಲ್ಲರೂ ಭಾರತೀಯರು. ಎಲ್ಲರೂ ಒಂದಾಗಿ ಬದುಕೋಣ ಎಂದರು.
ಪ್ರಾಥಮಿಕ ಶಾಲಾ ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ನಾನಾ ಮಹಾನ್ ಪುರುಷರ, ಸಂತರ, ವೀರ ಮಹಿಳೆಯರ, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಭಾರತದ ಇತಿಹಾಸವನ್ನು ಮೆಲುಕು ಹಾಕಿದರು.
ಕಾರ್ಯಕ್ರಮದಲ್ಲಿ ಅಂಜುಮನ್ ಸಂಸ್ಥೆಯ ಸದಸ್ಯರು, ಬೋಧಕ/ ಬೋಧಕೇತರ ಸಿಬ್ಬಂದಿಗಳು. ಪಾಲಕರು, ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಪ್ರಾಚಾರ್ಯ ಡಾ. ಐ ಎ ಮುಲ್ಲಾ, ಎನ್ ಬಿ ನಾಲತವಾಡ, ಪತ್ರಿಕೊದ್ಯಮ ವಿಭಾಗದ ಡಾ. ಎಸ್.ಎಸ್. ಅದೋನಿ ಉಪಸ್ಥಿತರಿದ್ದರು.