ಧಾರವಾಡ | ಇಂಟ್ಯಾಕ್ ರಸಪ್ರಶ್ನೆ ಕಾರ್ಯಕ್ರಮ: ಅವಳಿನಗರದ 12 ಶಾಲೆಗಳ ವಿದ್ಯಾರ್ಥಿಗಳು ಭಾಗಿ

Date:

ಧಾರವಾಡ ನಗರದ ಇಂಟ್ಯಾಕ್ ಸಂಸ್ಥೆಯಿಂದ ಆಗಸ್ಟ್ 5ರಂದು ಜೆಎಸ್‌ಎಸ್ ಕಾಲೇಜಿನ ಉತ್ಸವ ಸಭಾಂಗಣದಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಇಂಟ್ಯಾಕ್ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದರು. ಅವಳಿನಗರದ ಒಟ್ಟು 12 ಶಾಲೆಗಳ 116 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.

- Advertisement -

ಮೊದಲು ಲಿಖಿತ ರಸಪ್ರಶ್ನೆ ಸುತ್ತಿನಲ್ಲಿ 4 ತಂಡಗಳನ್ನು ಆಯ್ಕೆ ಮಾಡಿದರು. ಮೌಖಿಕ ಅಂತಿಮ ಸುತ್ತಿನಲ್ಲಿ ನಾಲ್ಕು ತಂಡಗಳಿಗೆ ಆಲೂರ ವೆಂಕಟರಾವ್, ದ ರಾ ಬೇಂದ್ರೆ, ಚೆನ್ನವೀರ ಕಣವಿ ಮತ್ತು ರಾ ಹ ದೇಶಪಾಂಡೆ ಎಂದು ಹೆಸರಿಟ್ಟಿದ್ದರು. ಅಂತಿಮವಾಗಿ ರಾ.ಹ.ದೇಶಪಾಂಡೆ ತಂಡದ ರಾಜೀವ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ನಿಶ್ಚಿತಾ ಸಂಕಪ್ಪಗೋಳ ಮತ್ತು ಓಂಕಾರ ಜಿರಗೋಡ ಪ್ರಥಮ ಸ್ಥಾನ ಗಳಿಸಿದರು. ಆಲೂರ ವೆಂಕಟರಾವ್ ತಂಡದ ಧಾರವಾಡ ಜೆಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯ ಅನ್ವಿ ಜಾಮದಾರ ಮತ್ತು ಶ್ರೇಯಾಂಕ ಈನೂರ ದ್ವೀತಿಯ ಸ್ಥಾನ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ವಿಜೇತರಿಗೆ ಬಹುಮಾನ ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರಗಳನ್ನು ನೀಡಿದರು. ಲಿಖಿತ ರಸಪ್ರಶ್ನೆ ಕಾರ್ಯಕ್ರಮವನ್ನು ಪ್ರೊ.ಸುರೇಶ ಗುದಗನವರ ಹಾಗೂ ಮೌಖಿಕ ರಸಪ್ರಶ್ನೆಯನ್ನು ಡಾ.ಶಶಿಧರ ನರೇಂದ್ರ ನಡೆಸಿಕೊಟ್ಟರು. ಇಂಟ್ಯಾಕ್ ಸಂಚಾಲಕ ಡಾ.ಮೋಹನ ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಚಾಲಕ ಆರ್ ಜಿ ತಿಮ್ಮಾಪುರ ಸ್ವಾಗತಿಸಿದರು. ಡಾ. ಎನ್ ಬಿ ನಾಲತವಾಡ ನಿರೂಪಿಸಿದರು. ಡಾ.ರಾಜಶ್ರೀ ಗುದಗನವರ ವಂದಿಸಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರವೇ ಪ್ರಾರಂಭವಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ

ಕಾರ್ಯಕ್ರಮದಲ್ಲಿ ಜಿ ಸಿ ತಲ್ಲೂರ, ಡಾ. ಹನುಮಾಕ್ಷಿ ಗೋಗಿ, ಡಾ. ಆರ್ ಜಿ ಪುರಾಣಿಕ, ಲತಾ ಶಹಾಪುರ, ಅಮೃತಾ ಜೋಶಿ, ರಶ್ಮಿ ಭಾರದ್ವಾಜ್, ಸಂಗೀತಾ ಜಾಯಿ, ವೀಣಾ ಜೋಶಿ, ಭಾರತಿ ಪಿಳ್ಳೆ, ಸವಿತಾ ಕುಲಕರ್ಣಿ, ಶಬೀರಾ ನಾಯ್ಕವಾಡಿ, ಚನ್ನಬಸಪ್ಪ ಬೆಣ್ಣಿ, ಮನುಕುಮಾರ ಹಿರೇಮಠ, ಸನ್ಮತಿ ದೊಡಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...