2023ರ ಅವಧಿಯಲ್ಲಿ ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಮುಂತಾದ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪ್ರಕಟಣಾ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು, ಪುಸ್ತಕದ ಒಂದು ಪ್ರತಿ, ಕಾಪಿರೈಟ್‍ನ ನೋಂದಣಿಯ ದೃಢೀಕರಿಸಿದ ನಕಲುಪ್ರತಿ ಮತ್ತು ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು. ದಾಖಲಾತಿಗಳು ಇಲ್ಲದಿದ್ದಲ್ಲಿ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಸಮಿತಿ ತಿಳಿಸಿದೆ.
ಜನವರಿ 31, 2024ರ ಒಳಗಾಗಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ಬಂಧನೆಗಳಿಗೆ ಒಳಪಟ್ಟು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಫೆಬ್ರವರಿ 5, 2024ರಂದು ಸಂಜೆ 5ಗಂಟೆಯ ಒಳಗಾಗಿ ಸಲ್ಲಿಸಬೇಕು.
ಅರ್ಜಿನಮೂನೆಯನ್ನು ಇಲಾಖೆಯ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-22864990, 22867358. ಸಂಪರ್ಕಿಸಬಹುದೆಂದು ಧಾರವಾಡ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.