ಪರಿಸರ ಸಂರಕ್ಷಣೆಯು ಶತಮಾನಗಳಿಂದ ವಿಶ್ವದ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಪರಿಸರ ರಕ್ಷಣೆಗೆ ಕಾನೂನು ಉಪಯೋಗಿಸುವುದು ಮತ್ತು ಮಾಲಿನ್ಯದ ಮೇಲೆ ಕಟ್ಟುನಿಟ್ಟು ನಿಯಮಗಳನ್ನು ಜಾರಿಗೊಳಿಸುವುದರಿಂದ ಪರಿಸರದ ಅವನತಿ ತಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿ ಎನ್ ಎಫ್ ಮಾಳನ್ನವರ ಹೇಳಿದರು.
ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ ಮತ್ತು ಲಯನ್ಸ್ ಕ್ಲಬ್ ಧಾರವಾಡ ಗ್ಯಾಲಕ್ಸಿ, ಸಂಯೋಗದಲ್ಲಿ ಹಾರೊಬೆಳವಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣಾ ದಿನಾಚರಣೆಯಲ್ಲಿ ಮಾತನಾಡಿದರು.
ಲಯನ್ಸ್ ಕ್ಲಬ್ ಧಾರವಾಡ ಗ್ಯಾಲಕ್ಸಿಯ ಅಧ್ಯಕ್ಷ ಗುಂಡಪ್ಪ ರಾಥೋಡ್ ಮಾತನಾಡಿ, “ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವುದು, ತ್ಯಾಜ್ಯದ ಪ್ರಮಾಣ ಕಡಿಮೆ ಮಾಡುವುದರಿಂದ ಪರಿಸರ ಸಂರಕ್ಷಣೆ ಆಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮನರೇಗಾ ಅಡಿ ಕ್ರಿಯಾ ಯೋಜನೆ ಮಂಜೂರಾತಿಗೆ ಕೃಷಿ ಕೂಲಿಕಾರರ ಸಂಘ ಆಗ್ರಹ
ಅಂಜುಮನ್ ಪದವಿ ಮಹಾವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿ ಡಾ. ನಾಗರಾಜ್ ಗುದಗನವರ್ ಮಾತನಾಡಿ, “ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವುದರಿಂದ ತಾಪಮಾನ, ಮಣ್ಣಿನ ಸವೆತವನ್ನು ಕಡಿಮೆ ಮಾಡುವ ಮೂಲಕ ಪರಿಸರ ಸಂರಕ್ಷಿಸಲು ಸಹಾಯವಾಗುತ್ತದೆ” ಎಂದರು.
ಗ್ರಾಮ ಪಂಚಾಯಿತಿ ಹಿರಿಯ ಸದಸ್ಯ ಶಂಕರಗೌಡ ಪಾಟೀಲ, ಲಯನ್ ಜ್ಯೋತಿ ಹಿರೇಮಠ, ಸಮುದಾಯ ಆರೋಗ್ಯ ಅಧಿಕಾರಿ ಪರ್ವೀನ್ ಭಾನು ತಾಳಿಕೋಟಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಇದ್ದರು.