ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

Date:

ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಕಡಲೆ: ಪ್ರತಿ ಕಿ.ಗ್ರಾಂ ಬೀಜಕ್ಕೆ 4 ಮಿ. ಲೀ ರೈಝೋಬಿಯಂ ಎಸ್.ಬಿ 120 ಮತ್ತು 4 ಮಿ. ಲೀ ರಂಜಕ ಕರಗಿಸುವ ಜೈವಿಕ ಗೊಬ್ಬರ ಬಿತ್ತನೆ ಮಾಡುವಾಗ ಬೀಜಕ್ಕೆ ಉಪಚರಿಸುವುದು. ಬಿತ್ತನೆಗೆ ಮೊದಲು ಬರ ನಿರೋಧಕತೆ ಹೆಚ್ಚಿಸಲು ಬೀಜವನ್ನು ಶೇ. 2 ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ 30 ನಿಮಿಷ ಅಥವಾ ಶೇ. 25 ರ ಗೋಮೂತ್ರದಲ್ಲಿ 8 ಗಂಟೆಗಳ ಕಾಲ ನೆನೆಸಿ, ಕನಿಷ್ಠ 7 ಘಂಟೆ ನೆರಳಿನಲ್ಲಿ ಒಣಗಿಸಿ ಬೀಜವನ್ನು ಕಠಿಣಗೊಳಿಸಿ ನಂತರ ರೈಜೋಬಿಯಂ ಹಾಗೂ ರಂಜಕ ಕರಗಿಸುವ ಅಣುಜೀವಿಯಿಂದ ಉಪಚರಿಸಬೇಕು. ಅಲ್ಲದೇ, ಬಿತ್ತನೆಯ ಸಮಯದಲ್ಲಿ ಎಕರೆಗೆ 8 ಕಿ. ಗ್ರಾಂ ಮೈಕೊರೈಜಾ ಜೈವಿಕಗೊಬ್ಬರವನ್ನು 200 ಕಿ.ಗ್ರಾಂ ಎರೆಹುಳು ಗೊಬ್ಬರದ ಜೊತೆಗೆ ಮಿಶ್ರಣ ಮಾಡಿ ಬಿತ್ತನೆಯ ಸಾಲಿನ ಮಣ್ಣಿನಲ್ಲಿ ಹಾಕಿ ಬೆರೆಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಕಡಲೆಯಲ್ಲಿ ನಟೆ ರೋಗ, ಸಿಡಿ ರೋಗ, ಸೊರಗು ರೋಗ ತಡೆಗಟ್ಟಲು ಪ್ರತಿ ಕಿ.ಗ್ರಾಂ ಬೀಜಕ್ಕೆ 2 ಗ್ರಾಂ ಕ್ಯಾಪ್ಟಾನ್ 80 ಡಬ್ಲೂ.ಪಿ ಅಥವಾ ಥೈರಾಮ್ 75 ಡಬ್ಲೂ.ಪಿ ಅಥವಾ ಮೆಂಕೋಜೆಬ್ 75 ಡಬ್ಲೂ.ಪಿ ಅಥವಾ 3.5 ಗ್ರಾಂ (ಕಾರ್ಬನಡೈಜಿಮ್ + ಮ್ಯಾಂಕೋಜೆಬ್) ಅಥವಾ 4 ಗ್ರಾಂ ಟ್ರೈಕೋಡರ್ಮಾ ಜೈವಿಕ ಶಿಲೀಂಧ್ರದಿಂದ ಬೀಜೋಪಚಾರ ಮಾಡಬೇಕು.

ಗೋಧಿ: ಎಕರೆಗೆ ಬೇಕಾಗುವ ಬಿತ್ತನೆ ಬೀಜವನ್ನು ದ್ರವ ರೂಪದ 80 ಮಿ.ಲೀ ಅಝೋಸ್ಫಿರಿಲಂ ಹಾಗೂ 80 ಮಿ.ಲೀ ದ್ರವ ರೂಪದ ರಂಜಕ ಕರಗಿಸುವ ಜೈವಿಕ ಗೊಬ್ಬರದಿಂದ ಉಪಚರಿಸಿ. ಬಿತ್ತನೆ ಮಾಡುವ ಮೊದಲು ರಸಗೊಬ್ಬರಗಳೆಲ್ಲವನ್ನೂ 6-8 ಸೆಂ.ಮೀ ಆಳದ ಸಾಲುಗಳಲ್ಲಿ ಮಣ್ಣಿನಲ್ಲಿ ಬೆರೆಸಿ, 23 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತನೆ ಮಾಡಬೇಕು. ಅಲ್ಲದೇ, ಬಿತ್ತನೆಯ ಸಮಯದಲ್ಲಿ ಎಕರೆಗೆ 8 ಕಿ.ಗ್ರಾಂ ಮೈಕೋರೈಜಾ ಜೈವಿಕ ಗೊಬ್ಬರವನ್ನು 200 ಕಿ.ಗ್ರಾಂ ಎರೆಹುಳು ಗೊಬ್ಬರದ ಜೊತೆಗೆ ಮಿಶ್ರಣ ಮಾಡಿ ಬಿತ್ತನೆಯ ಸಾಲಿನ ಮಣ್ಣಿನಲ್ಲಿ ಹಾಕಿ ಬೆರೆಸಬೇಕು.

ಜೋಳ: ಪ್ರತಿ ಕಿ.ಗ್ರಾಂ ಬೀಜಕ್ಕೆ ಕನಿಷ್ಠ 4 ಮಿ.ಲೀ ಅಝೋಸ್ಫಿರಿಲಂ ಮತ್ತು 4 ಮಿ.ಲೀ ದ್ರವ ರೂಪದ ರಂಜಕ ಕರಗಿಸುವ ಜೈವಿಕ ಗೊಬ್ಬರ ಬಿತ್ತನೆ ಮಾಡುವಾಗ ಬೀಜಕ್ಕೆ ಉಪಚರಿಸಬೇಕು. ಬೀಜೋಪಚಾರದ ಪೂರ್ವದಲ್ಲಿ ಪ್ರತಿ ಕಿ.ಗ್ರಾಂ ಬೀಜವನ್ನು 1.5 ಲೀ ನೀರಿನಲ್ಲಿ 30 ಗ್ರಾಂ ಕ್ಯಾಲ್ಸಿಯಂ ಕ್ಲೋರೈಡ್ ಅಥವಾ 7.5 ಗ್ರಾಂ ಪೊಟ್ಯಾಷಿಯಂ ನೈಟ್ರೇಟ್ ಬೆರೆಸಿದ ಅಥವಾ ಗೋಮೂತ್ರ (ಶೇ. 25) ಬೆರೆಸಿದ ದ್ರಾವಣದಲ್ಲಿ 8 ಘಂಟೆಗಳ ಕಾಲ ನೆನೆಸಿ ನೆರಳಿನಲ್ಲಿ ಒಣಗಿಸಿ ಬಿತ್ತುವುದರಿಂದ ಬೀಜ ಮೊಳಕೆ ಹಾಗೂ ಸಸಿಗಳ ಬೆಳವಣಿಗೆ ಸುಧಾರಿಸುವುದು.

ಇದನ್ನು ಓದಿದ್ದೀರಾ? ಬೆಂಗಳೂರು | ಆನ್‌ಲೈನ್ ಉದ್ಯೋಗದ ಹೆಸರಲ್ಲಿ 6 ಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ

ಕುಸುಬೆ: ಬಿತ್ತುವ ಪೂರ್ವದಲ್ಲಿ ಬೀಜವನ್ನು ಶೇ. 2 ರ ಕ್ಯಾಲ್ಸಿಯಂ ಕ್ಲೋರೈಡ್ ದ್ರಾವಣದಲ್ಲಿ (1.0 ಲೀ ನೀರಿನಲ್ಲಿ 20 ಗ್ರಾಮ ಕ್ಯಾಲ್ಸಿಯಂ ಕ್ಲೋರೈಡ್) 12 ಘಂಟೆಗಳ ಕಾಲ ನೆನೆಸಿ ನಂತರ ನೆರಳಿನಲ್ಲಿ ಒಣಗಿಸಿ ಬಿತ್ತುವುದರಿಂದ ಬೀಜ ಮೊಳಕೆ ಪ್ರಮಾಣ ಅಧಿಕವಾಗುವುದು. ನಂತರ ಪ್ರತಿ ಎಕರೆಗೆ ಬೇಕಾಗುವ ಬಿತ್ತನೆ ಬೀಜವನ್ನು 200 ಗ್ರಾಂ ಅಝೋಸ್ಫಿರಿಲಂ ಜೀವಾಣುವಿನಿಂದ ಉಪಚರಿಸಿ ಬಿತ್ತಬೇಕು. ಮತ್ತು ಸತುವಿನ ಸಲ್ಪೇಟ್ 6 ಕಿ.ಗ್ರಾಂ ಅನ್ನು ಬಿತ್ತುವಾಗ ಪುಡಿ ಮಾಡಿದ ಕೊಟ್ಟಿಗೆ ಗೊಬ್ಬರದ ಜೊತೆಗೆ ಸಮಪ್ರಮಾಣದಲ್ಲಿ ಬೆರೆಸಿ ಪ್ರತ್ಯೇಕವಾದ ಎಳೆಶಡ್ಡಿ ಮುಖಾಂತರ ಮಣ್ಣಿನಲ್ಲಿ ಬೆರೆಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಡಿಎಂಸಿ ಸಂಘದ ಹೋರಾಟಕ್ಕೆ ಫಲ: 45 ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ 45 ಸಾವಿರಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ...

ಉತ್ತರ ಕನ್ನಡ | ಡಿ. 1ರಿಂದ ಎಫ್‌ಎಫ್‌ಎಸ್ ಮೂಲಕ ರಸಗೊಬ್ಬರ ಮುಂಗಡ ಬುಕ್ಕಿಂಗ್ ಕಡ್ಡಾಯ

ರೈತರು ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಮೊಬೈಲ್ ಮೂಲಕವೇ ಮುಂಗಡವಾಗಿ ಬುಕ್ಕಿಂಗ್‌ ಮಾಡಿ,...

ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ರವಿ ಹಂಚ್ ವಿರುದ್ಧ ಕ್ರಮಕ್ಕೆ ಆಗ್ರಹ

ವಿಶ್ವಗುರು ಬಸವಣ್ಣನವರ ಕುರಿತು ಬಸವ ಮಂಟಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅನಿವಾಸಿ...

ಮಂಡ್ಯದಲ್ಲೇ ಹೃದ್ರೋಗ ಆಸ್ಪತ್ರೆ; ಸ್ಥಳ ಪರಿಶೀಲನೆ ನಡೆಸಿದ ಡಾ. ದಿನೇಶ್

ಮಂಡ್ಯ ಜಿಲ್ಲೆಯ ಜನರಿಗೆ ಗುಣಮಟ್ಟದ ಹೃದ್ರೋಗ ಚಿಕಿತ್ಸಾ ಸೇವೆ ಸ್ಥಳೀಯವಾಗಿಯೇ ದೊರಕಿಸುವ...