ಧಾರವಾಡ | ಜುಲೈ 21 ರೈತ ಹುತಾತ್ಮ ದಿನಾಚರಣೆ; ಮದ್ಯ ಮಾರಾಟ ನಿಷೇಧಕ್ಕೆ ಜಿಲ್ಲಾಧಿಕಾರಿ ಆದೇಶ

Date:

Advertisements

ರೈತ ಹುತಾತ್ಮ ದಿನಾಚರಣೆ ಆಚರಿಸುತ್ತಿರುವುದರ ಅಂಗವಾಗಿ ಧಾರವಾಡ ಜಿಲ್ಲೆಯ ನವಲಗುಂದ ಶಹರ ಮತ್ತು ಅಳಗವಾಡಿ ಗ್ರಾಮದಲ್ಲಿ ಜುಲೈ 21ರಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜುಲೈ 20ರ ಮಧ್ಯರಾತ್ರಿ 12ರಿಂದ ಜುಲೈ 22ರ ಬೆಳಗಿನ 6 ಗಂಟೆಯವರೆಗೆ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

“ನಿಷೇಧಿತ ದಿನಾಂಕಗಳಂದು ಭಾರತೀಯ ಮದ್ಯ ತಯಾರಿಕಾ ಅಂಗಡಿಗಳು, ಬಿಯರ್‌ ಬಾರ್‌ಗಳು, ಕ್ಲಬ್‍ಗಳು ಮತ್ತು ಮದ್ಯದ ಡಿಪೋಗಳನ್ನು ಮುಚ್ಚಬೇಕು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತಿ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್ಸ್‌ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು, ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 (2) ರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ರಮ ವಿದ್ಯುತ್‌ ಬೇಲಿಗೆ 9 ಕಾಡಾನೆ ಬಲಿ: ಕ್ರಮ ಜರುಗಿಸಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

Advertisements

“ಧಾರವಾಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರು, ಆರಕ್ಷಕ ಅಧೀಕ್ಷಕರು ಹಾಗೂ ಹೆಚ್ಚುವರಿ ಅಬಕಾರಿ ಅಧಿಕ್ಷಕರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು” ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X