ಧಾರವಾಡ | ಕ.ವಿ.ವ ಸಂಘವು ಕನ್ನಡದ ಕಂಪನ್ನು ಗಡಿಯಾಚೆಗೂ ವಿಸ್ತರಿಸಿದೆ: ನ್ಯಾ. ಪ್ರಕಾಶ ಭಾವಿಕಟ್ಟಿ

Date:

ಕನ್ನಡದ ಕಂಪನ್ನು ನಾಡಿನಲ್ಲಿ ಮಾತ್ರವಲ್ಲದೆ ಗಡಿಯಾಚೆಗೂ ವಿಸ್ತರಿಸಿದ ಕ.ವಿ.ವ ಸಂಘದ ಮಹೋನ್ನತ ಸಾಧನೆಯಾಗಿದೆ ಎಂದು ನವೆಂಬರ್ 7ರಂದು ಸಂಘವು 70ನೇ ರಾಜ್ಯೋತ್ಸವದ ಅಂಗವಾಗಿ ನಾಡಹಬ್ಬ-2025 ನಿಮಿತ್ತ ಆಯೋಜಿಸಿರುವ ಸಾಧಕರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನ್ಯಾಯವಾದಿ ಪ್ರಕಾಶ ಭಾವಿಕಟ್ಟಿ ಮಾತನಾಡಿದರು.

- Advertisement -

ಕವಿವ ಸಂಘವು ನವ್ಹಂಬರ ತಿಂಗಳು ಪೂರ್ತಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಿ ಕನ್ನಡ ಭಾಷೆ ಸಂಸ್ಕೃತಿಯ ಹಿರಿಮೆ ಹೆಚ್ಚಿಸಿದೆ. ವಿದ್ಯಾರ್ಥಿಗಳು ಇಂದು ಓದಿನ ಜೊತೆಗೆ ಕನ್ನಡ ಕಟ್ಟುವ ಕಾರ್ಯ ಮಾಡಬೇಕು. ಅನ್ಯ ವಿಷಯಗಳತ್ತ ಗಮನ ಕೊಡದೇ ಸಮಯ ಪ್ರಜ್ಞೆಯೊಂದಿಗೆ ಅಧ್ಯಯನ ಮಾಡಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಸಾಧಕರ ಸನ್ಮಾನ ಪ್ರಶಸ್ತಿಗೆ ಭಾಜನರಾದ ವಾ.ಕ.ರಾ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಪ್ರಕಾಶಯ್ಯ ಶಿವಯೋಗಿಮಠ ಸನ್ಮಾನ ಸ್ವೀಕರಿಸಿ ಈ ಸನ್ಮಾನ ಇನ್ನೂ ಹೆಚ್ಚು ನನಗೆ ಕನ್ನಡದ ಕೆಲಸ ಮಾಡಲು ಪ್ರೇರಣೆಯಾಗಿದೆ. ನಾನು ನಿರ್ವಾಹಕನಾಗಿ ೨ ದಶಕಗಳಿಂದ ಶ್ರದ್ಧೆ ಬದ್ದತೆಯಿಂದ ಕಾರ್ಯ ಮಾಡಿದ್ದೇನೆ. ಪ್ರಯಾಣಿಕರ ಜೊತೆ ಆಂಗ್ಲ ಪದ ಬಳಸದೇ ಕನ್ನಡದಲ್ಲೇ ವ್ಯವಹರಿಸಿದ್ದೇನೆ. ಕನ್ನಡದ ಬಗ್ಗೆ ಕಿಟೆಲ್‌ರಂತಹ ವಿದೇಶಿ ಮಹನೀಯರು ಬಹುದೊಡ್ಡ ಕೊಡುಗೆ ನೀಡಿದ್ದು. ಕನ್ನಡಿಗರಾಗಿ ನಾವೇ ಕನ್ನಡದಲ್ಲಿ ವ್ಯವಹರಿಸದಿದ್ದರೆ ಹೇಗೆ? ಭಾಷೆ ಉಳಿದರೆ ಮಾತ್ರ ನಾಡು ಸಮೃದ್ಧವಾಗಲು ಸಾಧ್ಯ ಎಂದು ಹೇಳಿದರು.

ಕಿಟೆಲ್ ಕಾಲೇಜಿನ ಪ್ರಾಚಾರ್ಯ ಡಾ. ರೇಖಾ ಜೋಗುಳ ಮಾತನಾಡಿ, ಕವಿವ ಸಂಘಕ್ಕೂ ನಮ್ಮ ಸಂಸ್ಥೆಗಳಿಗೂ ಅವಿನಾಭಾವ ಸಂಬಂಧ ಮೊದಲಿನಿಂದಲೂ ಇದೆ. ಕನ್ನಡದ ಕೆಲಸಕ್ಕೆ ನಮ್ಮ ಸಂಸ್ಥೆಯ ಸಹಕಾರ ಸದಾಕಾಲ ತಮಗೆ ಇದೆ. ನಮ್ಮ ವಿದ್ಯಾರ್ಥಿಗಳು ಪ್ರತಿಭಾವಂತರಿದ್ದು ಜಾನಪದ ವಾದ್ಯ ಸ್ಪರ್ಧೆಯಲ್ಲಿ ರಾಷ್ಟೀಯ ಮಟ್ಟದಲ್ಲಿ ನಾಲ್ಕನೆ ಸ್ಥಾನ ಪಡೆದದ್ದು ಅಭಿಮಾನದ ಸಂಗತಿ ಎಂದರು.

ಕಿಟೆಲ್ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಭರತ ನಾಟ್ಯ, ಜಾನಪದ ಸಮೂಹ ನೃತ್ಯ, ಹಾಡು ವೈವಿದ್ಯಮಯ ಕಾರ್ಯಕ್ರಮಗಳು ಜರುಗಿದವು. ಪ್ರಾರಂಭದಲ್ಲಿ ಸರಿತಾ ಮಹೇಶ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ತಬಲಾ ಸಾಥ್ ಡಾ. ಅಲ್ಲಮಪ್ರಭು ಕಡಕೋಳ ಹಾಗೂ ವಿನೋದ ಪಾಟೀಲ ಹಾರ್ಮೊನಿಯಮ್ ಸಾಥ್ ನೀಡಿದರು. ವೀರಣ್ಣ ಒಡ್ಡೀನ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕ ಮಾತನಾಡಿದರು. ಶಂಕರ ಕುಂಬಿ ನಿರೂಪಿಸಿದರು. ಸತೀಶ ತುರಮರಿ ಸನ್ಮಾನ ಪತ್ರ ಓದಿದರು, ಶಿವಾನಂದ ಭಾವಿಕಟ್ಟಿ ವಂದಿಸಿದರು.

ಇದನ್ನೂ ಓದಿ ಧಾರವಾಡ | ಕನಕದಾಸರು ಯಾವುದೇ ಜಾತಿ, ಮತ, ಧರ್ಮಕ್ಕೆ ಸೀಮಿತವಾದವರಲ್ಲ: ಡಾ. ಸುರೇಶ ಹೊರಕೇರಿ

ಪ್ರೊ. ಎಸ್. ಜಿ. ಬೇಲಿ, ಡಾ. ಸುರೇಶ ನ್ಯಾಮತಿ, ಕಿರಣ ಸಿದ್ಧಾಪೂರ, ಭೀಮು ಖಾಟವೆ, ಸುಪ್ರೀಯಾ ಭಟ್, ಈರಣ್ಣ ನವಲಗುಂದ, ಮೆಹಬೂಬಅಲಿ, ಬಸಯ್ಯ ಪತ್ರಿಮಠ, ಡಾ. ಪ್ರಕಾಶ ಮಲ್ಲಿಗವಾಡ ಹಾಗೂ ಕಿಟೆಲ್ ಮಹಾವಿದ್ಯಾಲಯದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...