ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು.
“ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರಿಂದ ಈ ದಂಧೆಗೆ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಕೆಲವು ದುಷ್ಟ ಕೈಗಳು ಮತ್ತು ಪೊಲೀಸರ ಬೇಜವಾಬ್ದಾರಿತನವೇ ಈ ದಂಧೆ ಬೆಳೆಯಲು ಕಾರಣವಾಗಿದೆ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಲಂಚದ ಆರೋಪ; ಕರ ವಸೂಲಿಗಾರ ಅಮಾನತು
“ಮಟ್ಕಾ ದಂಧೆ ಹೀಗೆ ಮುಂದುವರೆದರೆ ತಹಶೀಲ್ದಾರರ ಕಚೇರಿ ಆವರಣದಲ್ಲಿ ಅಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು” ಎಂದು ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.