ಧಾರವಾಡ | ಇನ್ಸ್ಟಾಗ್ರಾಮ್‌ನಲ್ಲಿ ರೀಲ್ಸ್ ವಿಚಾರಕ್ಕೆ ಯುವಕನ ಅಪಹರಣ; ಬೆತ್ತಲೆಗೊಳಿಸಿ ಹಲ್ಲೆ

Date:

ಇನ್ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್‌ ಮಾಡಿದ್ದ ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ಬೆತ್ತಲೆಗೊಳಿಸಿ, ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -

ಧಾರವಾಡದ ನಿವಾಸಿ ಸಂದೀಪ್‌ ಹಲ್ಲೆಗೊಳಗಾದ ಯುವಕ ಎಂದು ತಿಳಿದುಬಂದಿದೆ. ಆತ ‘ಹುಬ್ಬಳ್ಳಿಗೆ ನಾನೇ ಡಾನ್‌’ ಎಂದು ರೀಲ್ಸ್‌ ಮಾಡಿದ್ದ. ಅಲ್ಲದೆ, ಈ ಹಿಂದೆ ಸ್ನೇಹಿತನಾಗಿದ್ದ ಪ್ರಜ್ವಲ್‌ ಎಂಬಾತನ ತಾಯಿ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡಿ ರೀಲ್ಸ್‌ ಮಾಡಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ತನ್ನ ತಾಯಿಯನ್ನು ನಿಂದನೆ ಮಾಡಿದ್ದರಿಂದ ಉದ್ರಿಕ್ತಗೊಂಡ ಪಜ್ವಲ್‌, ತನ್ನ ಸ್ನೇಹಿತರಾದ ವಿನಾಯಕ್, ಗಣೇಶ್, ಸಚಿನ್, ಮಂಜು ಜೊತೆ ಸೇರಿ ಸಂದೀಪ್‌ನನ್ನುಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಸಂತೋಷ್ ಬಾಬು, “ಎರಡು ವಿಡಿಯೋಗಳಿಂದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ವಲ್ ತಾಯಿ ಬಗ್ಗೆ ಸಂದೀಪ್‌ ಅವಾಚ್ಯವಾಗಿ ನಿಂದಿಸಿ ರೀಲ್ಸ್‌ ಮಾಡಿದ್ದ. ಇದರಿಂದ ಸಿಟ್ಟಾದ ಪ್ರಜ್ವಲ್‌ ಮತ್ತು ಆತನ ಸ್ನೇಹಿತರು ಈತನನ್ನು ಅಪಹರಿಸಿ, ಥಳಿಸಿದ್ದಾರೆ. ಮಾರ್ನಾಲ್ಕು ತಿಂಗಳುಗಳ ಹಿಂದೆ ಘಟನೆ ನೆಡೆದಿದೆ. ಈವರೆಗೆ ಸಂದೀಪ್ ದೂರು ನೀಡಿಲ್ಲ” ಎಂದು ತಿಳಿಸಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್, ಮಂಜು ಎಂಬವರನ್ನು ವಶಕ್ಕೆ ಪಡೆದ ಹುಬ್ಬಳ್ಳಿ ಶಹರ ಠಾಣಾ ಪೊಲೀಸರು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ರೀಲ್ಸ್ ಮಾಡಿದ್ದ ಸಂದೀಪ್​ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...