ಧಾರವಾಡ | ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ವಿವಿಧ ಸಂಘಟನೆಗಳ‌ ಪ್ರತಿಭಟನೆ

Date:

ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಧಾರವಾಡದಲ್ಲಿ ಎಐಎಂಎಸ್ಎಸ್, ಎಐಡಿವೈಒ ಹಾಗೂ ಎಐಡಿಎಸ್ಒ ಸಂಘಟನೆಗಳು ಪ್ರತಿಭಟನಾ ರ್ಯಾಲಿ ನಡೆಸಿದವು.

- Advertisement -

ಧಾರವಾಡದ ಕಲಾಭವನ ಮೈದಾನದಿಂದ ವಿವೇಕಾನಂದ ವೃತ್ತದವರೆಗೆ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು, “ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೂಂಡಾಗಳು ದಾಳಿ ಮಾಡಿರುವುದು ಖಂಡನೀಯ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಎಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಗಂಗೂಬಾಯಿ ಕೋಕರೆ ಮಾತನಾಡಿ, “ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಸಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಈ ಕೃತ್ಯ ಎಸಗಿರುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಉದ್ದೇಶಪೂರ್ವಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ” ಎಂದರು.

ಎಐಡಿವೈಒ ಜಿಲ್ಲಾಧ್ಯಕ್ಷ ಭವಾನಿಶಂಕರ್ ಎಸ್ ಗೌಡ ಮಾತನಾಡಿ, “ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಮಾಧ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನಗಳ ಮೂಲಕ ಪೋರ್ನೋಗ್ರಫಿ ವೆಬ್‌ಸೈಟ್‌ಗಳನ್ನು ಹರಿಬಿಡುತ್ತಿರುವುದು, ದುರಾಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣಗಳಾವೆ. ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡದಿರುವುದರ ಪರಿಣಾಮವಾಗಿ ಯುವಕರು ಇಂತಹ ಅನಾರೋಗ್ಯಕರ ದುಷ್ಚಟಗಳಿಗೆ ಬಲಿಯಾಗುತ್ತಿದ್ದಾರೆ” ಎಂದರು.

“ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಭಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸುಗಳನ್ನು ಮಾಡಿದ್ದರೂ ಕೂಡ ಸರ್ಕಾರಗಳು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಕೈಗೊಂಡಿಲ್ಲ. ಜತೆಗೆ ಇಂದಿನ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸಡಿಲತೆ, ನೂನ್ಯತೆಗಳಿಂದಾಗಿ ಎಷ್ಟೋ ಅಪರಾಧಗಳನ್ನು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು. ಮಧುಲತಾ ಗೌಡರ್, ಸಿಂಧು ಕೌದಿ, ರಣಜಿತ್ ದೂಪದ್, ದೇವಮ್ಮ ದೇವತ್ಕಲ್, ಪ್ರೀತಿ ಸಿಂಗಾಡಿ, ಸ್ಪೂರ್ತಿ ಚಿಕ್ಮಠ್, ಸಿಮೋನ್ ಸೂರ್ಯವಂಶಿ, ಶಾಂತೇಶ್ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....