ಪರಕೀಯರಿಂದ ನಮ್ಮನ್ನು ಸ್ವತಂತ್ರಗೊಳಿಸಲು ಸ್ವಾತಂತ್ರ್ಯದ ಕನಸನ್ನು ಕಂಡ ಮಹನೀಯರಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನೂ ಒಬ್ಬರು. ವಿಶೇಷವಾಗಿ ರಾಯಣ್ಣ ಉತ್ತರ ಕರ್ನಾಟಕದ ಹೆಮ್ಮೆ. ಇಂತಹ ಮಹಾನ್ ನಾಡಪುತ್ರನನ್ನು ಪಡೆದ ನಾವೇ ಧನ್ಯರು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ನಡೆದ ಆಗಸ್ಟ್ 15ರ ಬೆಳಿಗ್ಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನಸೂರ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಮಾತನಾಡಿ, “ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿ, ಸ್ವಾತಂತ್ರ್ಯದ ದೀವಿಗೆಯನ್ನು ಹೊತ್ತಿಸಿದ ಚರಿತ್ರೆಯಲ್ಲಿ ಶಾಶ್ವತವಾಗಿ ಅಜರಾಮರನಾಗಿ ಉಳಿಯುವ ಸಂಗೊಳ್ಳಿ ರಾಯಣ್ಣನಂತಹ ಕಲಿಗಳು ಮನೆಗೊಬ್ಬ ರಾಯಣ್ಣ ಎಂಬಂತೆ ಉದಯಿಸಿ ಬರಬೇಕಿದೆ” ಎಂದರು.
ಈ ಸುದ್ದಿ ಓದಿದ್ದೀರಾ? 77 ವರ್ಷಗಳಿಂದ ಭಾರತ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ: ಸಭಾಪತಿ ಬಸವರಾಜ ಹೊರಟ್ಟಿ
ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ ಕೆ, ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ಹಲವು ಸಮುದಾಯಗಳ ಮುಖಂಡರು, ಸಾರ್ವಜನಿಕರು, ಅಧಿಕಾರಿಗಳು ಇದ್ದರು.