ಜಿಲ್ಲೆಯ ವಿವಿಧ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಕಾಮಾಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳು ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ ಮೇ ದಿನ ಅಥವಾ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ 1ರಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.
ಆ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ ಸಂಚಾಲಕಿ ನಿಂಗಮ್ಮ ಸವಣೂರ ಇದ್ದರು. ತಾಲೂಕಿನ ನೂರಾರು ಕೂಲಿಕಾರ್ಮಿಕರು ಇಲ್ಲಿ ನೆರೆದಿದ್ದರು. ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದರು.

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಮಗಾರಿಯ ಸ್ಥಳದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ನೇತೃತ್ವದಲ್ಲಿ ಕೇಕ್ ಕತ್ತರಿಸುವ ಮೂಲಕ ಕಾರ್ಮಿಕರ ದಿನ ಆಚರಿಸಿದರು.