ಧಾರವಾಡ | ಚಿರತೆ ಓಡಾಟ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

Date:

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೀಪದ ಸೂರ್ಯನಗರ ಮತ್ತು ಭುವನೇಶ್ವರಿ ನಗರದಲ್ಲಿ ಬುಧವಾರ ಕೆಲವು ಮಹಿಳೆಯರು ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಚಿರತೆ ನೋಡಿರುವುದನ್ನು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಬಳಿಕ ಚಿರತೆಯನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ. ಆದರೆ ಚಿರತೆ ಜನವಸತಿ ಪ್ರದೇಶಕ್ಕೆ ನುಗ್ಗಿರುವುದನ್ನು ಅರಣ್ಯ ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

“ಈಗ ಬೇಸಿಗೆ. ಹಾಗಾಗಿ ನೀರು ಅರಸಿ ಚಿರತೆ ಈ ಭಾಗಕ್ಕೆ ಬಂದಿರಬಹುದು. ಶಾಂಭವಿ ನಗರ, ಹೊಯ್ಸಳ ನಗರ ಸುತ್ತಲಿನ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ರಾತ್ರಿ ಗಸ್ತು ತಿರುಗುವರು. ಚಿರತೆ ಇರುವುದರ ಕುರಿತು ಯಾವುದೇ ಹೆಜ್ಜೆ ಗುರುತು ಕಂಡುಬಂದಿಲ್ಲ” ಎಂದು ವಲಯ ಅರಣ್ಯ ಅಧಿಕಾರಿ ಪ್ರದೀಪ್ ಪವಾರ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ; ಸಿಬ್ಬಂದಿ ರಕ್ಷಣೆ

“ಚಿರತೆ ಇರುವ ಕುರಿತು ದೃಢೀಕರಿಸುವ ಯಾವುದೇ ಸೂಚನೆ ಕಂಡುಬಂದರೆ, ಅದನ್ನು ಹಿಡಿಯಲು ಇಲಾಖೆ ಬೋನು ಇಡುತ್ತದೆ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...