ಧಾರವಾಡ | ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಹೋರಾಟ‌ ಮಾಡಲಿ: ಶಾಸಕ ಕೋನರೆಡ್ಡಿ

Date:

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಸಮಸ್ಯೆಗಳ ಕಡೆಗೆ ಗಮನಹರಿಸದೆ ಬಿಜೆಪಿಯವರು ಒಂದು ವಾರ ಬರೀ ವಾಲ್ಮಿಕಿ ಹಗರಣ ವಿವಾರವಾಗಿ ಬರಿ ಗದ್ದಲ ಮಾಡಿದ್ದಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿಯವರು ಹೋರಾಟ ಮಾಡಲಿ ಎಂದು ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ ತಿಳಿಸಿದರು.

- Advertisement -

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, “ನಿರಂತರ ಹೋರಾಟದ ಕಿಚ್ಚನ್ನು ಹೊತ್ತಿಸಿದ ನಮ್ಮ ನಾಡಿನಲ್ಲಿ, ಕೇಂದ್ರ ಸರ್ಕಾರವು ಮಹದಾಯಿ ಯೋಜನೆ ಜಾರಿಮಾಡಲು ಕುಂಟು ನೆಪ ಹೇಳುತ್ತಿದೆ. ವನ್ಯಜೀವಿ ಮಂಡಳಿಯ ನೆಪ ಹೇಳುತ್ತ ಮಹದಾಯಿ ಯೋಜನೆಗೆ ಮೀನಮೇಷ ಮಾಡುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಹಿಂದೆ ದಿ‌ವಂಗತ ಅನಂತಕುಮಾರ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ ಒತ್ತಡ ಹಾಕುತ್ತಿದ್ದರು. ಈಗ ಆ ಜವಾಬ್ದಾರಿ ಪ್ರಹ್ಲಾದ ಜೋಶಿ ತೆಗೆದುಕೊಂಡು ಮಹದಾಯಿಗೆ ಕ್ಲಿಯರೆನ್ಸ್ ಕೊಡಿಸುವ ಕಾರ್ಯ ಮಾಡಬೇಕಿದೆ. ಕೇಂದ್ರ ಸರಕಾರ ಯೋಜನೆ ಜಾರಿ ಮಾಡಬೇಕು ಅಂತ ಮನಸ್ಸು ಮಾಡಿದ್ರೆ ಒಂದು ತಿಂಗಳಲ್ಲಿ ಕೆಲಸ ಮುಗಿಯುತ್ತದೆ. ಹಾಗೇಯೆ ರಾಜ್ಯದ ಎಲ್ಲ ಸಂಸದರಿಗೂ ಮನವಿ ಮಾಡಿಕೊಳ್ಳುತ್ತೇವೆ. ಈಗಲಾದರೂ ಯೋಜನೆ ಜಾರಿಮಾಡುವ ಕಾರ್ಯಕ್ಕೆ ಮುಂದಾಗಬೇಕೆಂದು ಹೇಳಿದರು.

ಇದನ್ನು ಓದಿದ್ದೀರಾ? ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಮಳೆ ಬಹಳ ಆಗ್ತಾ ಇದೆ, ನಮಗೆ ಏನು ಪರಿಹಾರ ಕೊಡಬೇಕು ಎಂಬುದರ ಬಗ್ಗೆ ಸಲಹೆ ಕೊಡಬೇಕು ಎಂದ ಶಾಸಕ ಕೋನರೆಡ್ಡಿ, ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಮಹದಾಯಿ ಯೋಜನೆ ಜಾರಿಮಾಡಲು ಒಂದು ತಿಂಗಳು ಸಾಕಾಗುತ್ತದೆ. ಈ ಮುಂದಿನ ಒಂದು ವರ್ಷದಲ್ಲಿ ಮಹದಾಯಿ ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...