ಧಾರವಾಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ ಲಾಡ್

Date:

ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತದಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

- Advertisement -

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯಲ್ಲಿ ಮಾತನಾಡಿ, ಸರಕಾರವು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶವಾಗುವಂತೆ ಅಗತ್ಯ ಅನುದಾನ ನೀಡಲು ಕ್ರಮವಹಿಸಲಿದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಗತ್ಯ ಕಾಮಗಾರಿ, ಕಾರ್ಯಕ್ರಮಗಳನ್ನು ಯೋಜನಾ ವರದಿಯಲ್ಲಿ ಸೇರಿಸಬೇಕು. ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮುನ್ನೊಟವಾಗಬೇಕು. ಗ್ರಾಮೀಣ ಅಭಿವೃದ್ಧಿಗೆ ಮತ್ತು ನಗರ ಅಭಿವೃದ್ಧಿಗೆ ವಿಸೃತ ವರದಿ ರೂಪಿಸಬೇಕು. ಮೂಲಭೂತ ಸೌಕರ್ಯಗಳ ಹೆಚ್ಚಳ ಜೊತೆಗೆ ಜನರ ಕಲ್ಯಾಣ ಕಾರ್ಯಕ್ರಮಗಳ ಸೆರ್ಪಡೆ ಮಾಡಿ ಉತ್ತಮ ಯೋಜನೆ ರೂಪಿಸಬೇಕು. ಜನರ ಜೀವನಮಟ್ಟ ಸುಧಾರಣೆಗೆ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನಾ ವರದಿಯಲ್ಲಿ ಸೇರಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಸಲೀಂ ಅಹಮ್ಮದ ಮಾತನಾಡಿ, ಜಿಲ್ಲೆಯ ಸಮಗ್ರ ವರದಿಗೆ ಅಧಿಕಾರಿಗಳು ಅಗತ್ಯ ಯೋಜನಾ ವರದಿ ರೂಪಿಸಬೇಕು. ಎಲ್ಲ ಸಮುದಾಯಗಳ ಪ್ರಗತಿಗೆ ಪೂರಕವಾಗಿರಬೇಕು ಎಂದರು. ವಿಧಾನ ಪರಿಷತ್ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ ಮಾತನಾಡಿ, ಎಸ್.ಎಸ್.ಟಿ ಗ್ರಾಮಸಭೆ ಆಗಬೇಕು. ಜಿಲ್ಲೆಯ ಎಲ್ಲ ಎಸ್.ಸಿ., ಎಸ್.ಟಿ. ಸಮುದಾಯ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ, ನಮ್ಮ ಜಿಲ್ಲೆಯಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿ ಜರುಗುತ್ತಿದೆ. ಇಂದಿನ ಸಭೆ ಪೂರ್ವಭಾವಿ ಸಭೆ ಆಗಿದ್ದು, ಎಲ್ಲ ಸಮುದಾಯ, ಗ್ರಾಮ ಮತ್ತು ನಗರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಯನ್ನು ರೂಪಿಸಲಾಗುತ್ತದೆ. ಮುಂದಿನ ವಾರ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಯೋಜನಾ ವರದಿ ತಯ್ಯಾರಿಸುವ ಕುರಿತು ಕಾರ್ಯಾಗಾರ ಮಾಡಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಮಾತನಾಡಿದರು. ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಗುಂಜನ್ ಆರ್ಯ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ...

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...