ಧಾರವಾಡ | ಜಿಲ್ಲೆಯ ಅಭಿವೃದ್ಧಿ, ಗೌರವ ಹೆಚ್ಚಿಸಲು ಕೂಡಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಸ್ನೇಹಲ್. ಆರ್

Date:

ರಾಜ್ಯದಲ್ಲಿ ಧಾರವಾಡ ಜಿಲ್ಲೆಗೆ ವಿಶೇಷವಾದ ಸ್ಥಾನ ಹಾಗೂ ಗುರುತಿಸುವಿಕೆ ಇದೆ. ಇಲ್ಲಿನ ಸಾಹಿತ್ಯ, ಸಂಗೀತ, ಶಿಕ್ಷಣ ಮತ್ತು ಚಿತ್ರಕಲೆಗಳು ರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಗಳಿಸಿವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತು ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯ ಮೂಲಕ ಜಿಲ್ಲೆಯ ಗೌರವ ಹೆಚ್ಚಿಸಲು ಎಲ್ಲ ಸರ್ಕಾರಿ ನೌಕರರು ಕೂಡಿ ಕೆಲಸ ಮಾಡೋಣ. ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಮಯಪಾಲನೆಗೆ ಆದ್ಯತೆ ನೀಡಬೇಕು ಎಂದು ನೂತನ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಹೇಳಿದರು.

- Advertisement -

ಇಂದು ಫೆ.12ರ ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಪರಿಚಯಾತ್ಮಕ ಸಭೆ ಜರುಗಿಸಿ, ಇಲಾಖೆಗಳ ಮಾಹಿತಿ ಪಡೆದು, ಮಾತನಾಡಿ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಮ್ಮ ವೈಯಕ್ತಿಕ ಕಾರಣಗಳಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು. ನಾಗರಿಕರ ಬೇಡಿಕೆ, ಸಮಸ್ಯೆಗಳ ಕುರಿತು ಕ್ಷೇತ್ರ ಮಟ್ಟದಲ್ಲಿ, ತಾಲೂಕಾಮಟ್ಟದಲ್ಲಿ ಆಲಿಸಿ, ತಮ್ಮ ಹಂತದಲ್ಲಿ ಸಾಧ್ಯವಾದರೆ, ಅಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಬೇಕು. ಯಾವುದೇ ವ್ಯಕ್ತಿಗಳನ್ನು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡಿಸಬಾರದು. ಸರ್ಕಾರವು ಅನೇಕ ಇಲಾಖೆಗಳ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಜನರ ಮನೆಬಾಗಲಿಗೆ ತಲುಪಿಸುವ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜನಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮತ್ತು ಸಮಯೋಚಿತವಾಗಿ ಸಾರ್ವಜನಿಕರಿಗೆ ತಲುಪಿಸಲು ರಾಜ್ಯ ಸರ್ಕಾರವು ತಾಂತ್ರಿಕವಾಗಿ ಸಾಕಷ್ಟು ಅವಕಾಶಗಳನ್ನು ನೀಡಿದೆ. ಅದಾಗ್ಯೂ ಸಾರ್ವಜನಿಕರಿಗೆ ಸರ್ಕಾರಿ ಸೇವೆ ನೀಡುವಲ್ಲಿ ಅನಗತ್ಯವಾಗಿ ವಿಳಂಬ, ಉದಾಸೀನತೆ ಮತ್ತು ಕರ್ತವ್ಯ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಇಂತಹ ದೂರುಗಳು ಬಂದಲ್ಲಿ, ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿ, ಕ್ರಮಕೈಗೊಳ್ಳಲಿದೆ. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ತಮ್ಮ ವೃತ್ತಿ ನಿರ್ವಹಿಸುವಲ್ಲಿ ಉಂಟಾಗುವ ಅನಾನುಕೂಲತೆ, ಸಮಸ್ಯೆಗಳು ಇದ್ದಲ್ಲಿ, ಅಥವಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಲಹೆ ಸೂಚನೆಗಳಿದ್ದಲ್ಲಿ ನನ್ನೊಂದಿಗೆ ಹಂಚಿಕೊಳ್ಳಲು ಜಿಲ್ಲಾಧಿಕಾರಿಗಳ ಕಚೇರಿ ಮುಕ್ತವಾಗಿದೆ. ಎಲ್ಲರೂ ತಮ್ಮ ಜವಾಬ್ದಾರಿ ಹಾಗೂ ಹೋಣೆಗಾರಿಕೆಗಳನ್ನು ಅರಿತು ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ಜಿಲ್ಲೆಯ ಪ್ರತಿ ಇಲಾಖೆಯು ತನ್ನ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸರ್ಕಾರ ನಿಗದಿ ಪಡಿಸಿರುವ ಅವಧಿಯೊಳಗೆ ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳು ತಪ್ಪದೇ ನೀಡಬೇಕು. ವೈಯಕ್ತಿಕ ಕಾರಣಗಳಾಗಲಿ ಅಥವಾ ಕಚೇರಿ ಮಟ್ಟದ ಕೊರತೆಗಳಾಗಲಿ ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಉಂಟಾಗಬಾರದು. ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳು ಸಮಯಕ್ಕೆ ಸರಿಯಾಗಿ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲಾ ಅಧಿಕಾರಿಗಳು ಕ್ರಿಯಾಶೀಲರಾಗಿದ್ದಿರಿ. ಆದ್ದರಿಂದ ಕಾರ್ಯಕ್ಷಮತೆಯನ್ನು ತೋರಿಸಿ, ಸೇವೆಗಳನ್ನು ಸಮಯಕ್ಕೆ ಒದಗಿಸಿ ಎಂದು ತಿಳಿಸಿದರು.

ತುರ್ತು ಕಡತಗಳು ಅಥವಾ ಅನುಮೋದನೆಗಳ ವಿಷಯದಲ್ಲಿ ಅಧಿಕಾರಿಗಳು ನೇರವಾಗಿ ತಮ್ಮ ಕಚೇರಿಗೆ ಬರಬಹುದು. ಅಧಿಕಾರಿಗಳು ಯಾವುದೇ ಸಮಯದಲ್ಲಾದರೂ ನೇರವಾಗಿ ಭೇಟಿ ಮಾಡಬಹುದು. ತುರ್ತು ವಿಷಯಗಳಿಗೆ ತಕ್ಷಣ ಪ್ರವೇಶ ಕಲ್ಪಿಸಿದೆ. ಸಾರ್ವಜನಿಕರ ಭೇಟಿಗಾಗಿ ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಅವಕಾಶವಿದೆ. ಫೈಲ್‍ಗಳು ಬಾಕಿ ಉಳಿಯುವುದು, ಅನುಮೋದನೆ ವಿಳಂಬವಾಗುವುದು ಇತ್ಯಾದಿ ಕಾರಣಗಳಿಂದ ಯಾವುದೇ ಕೆಲಸ ತಡವಾಗಬಾರದು. ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸರ್ಕಾರಿ ಕೆಲಸಗಳಲ್ಲಿ ವಿಳಂಬವಾಗಬಾರದು. ನಾವು ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ನಾನು ಈಗಾಗಲೇ ಕೆಲಸ ಪ್ರಾರಂಭಿಸಿದ್ದೇನೆ. ನಮ್ಮ ತಂಡ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಒಳ್ಳೆಯ ತಂಡದ ಮನೋಭಾವ ಬೆಳೆಸಿ, ಜನರಿಗೆ ಉತ್ತಮ ಸೇವೆ ನೀಡೋಣ ಎಂದು ತಿಳಿಸಿದರು.

ಇದನ್ನೂ ಓದಿ ಧಾರವಾಡ | ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಪಿ.ಎಚ್.ಡಿ ಪದವಿ ಪ್ರಧಾನ

ವೇದಿಕೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶೇಖ ಅಬ್ದುಲ್ ಅಲಿಂ ಸಿದ್ದಕಿ, ಪ್ರೋಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಇದ್ದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...