ಧಾರವಾಡ | ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿ ಸಾಹಿತ್ಯಕ್ಕಿದೆ: ಬಸವರಾಜ ಸಾದರ

Date:

Advertisements

ಮನುಷ್ಯನಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಶಕ್ತಿಯನ್ನು ಸಾಹಿತ್ಯ ಹೊಂದಿದ್ದು, ಜನಸಾಮಾನ್ಯರೂ ತಮ್ಮ ಇಷ್ಟದ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ, ಬೆಂಗಳೂರು ಆಕಾಶವಾಣಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಬಸವರಾಜ ಸಾದರ ಹೇಳಿದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ದಕ್ಷಿಣ ಪ್ರಾದೇಶಿಕ ಕಚೇರಿ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಲ್ಲಂಬಿಯಲ್ಲಿ ಬೇಗೂರು ಗ್ರಾಮ ಪಂಚಾಯಿತಿ, ಕೃಷಿ ಜ್ಯೋತಿ ರೈತ ಉತ್ಪಾದಕ ಕಂಪನಿ, ಗ್ರಾಮದ ಹಲವು ಯುವಕ ಮಂಡಳಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ರಾಮಲೋಕ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಪರಂಪರೆಯಲ್ಲಿನ ಶರಣರು, ಸಂತರು, ದಾಸರು, ಸಮಾಜ ಸುಧಾರಕರೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಾಹಿತ್ಯವನ್ನು ಆಶ್ರಯಿಸಿ ಮನುಕುಲದ ಕಲ್ಯಾಣಕ್ಕೆ ದುಡಿದಿದ್ದಾರೆ. ತಮ್ಮ ಸಾಹಿತ್ಯದಲ್ಲಿ ಹುಟ್ಟೂರು ಮತ್ತು ಬಾಲ್ಯದ ಸಂಗತಿಗಳೇ ತುಂಬಿದ್ದು, ಬರೆದರೂ ತೀರದಷ್ಟು ಸಾಮಗ್ರಿಯನ್ನು ಒದಗಿಸುತ್ತಿದೆ. ಊರಿನ ಋಣವನ್ನು ತೀರಿಸಲು ಸಾಧ್ಯವಿಲ್ಲದಿದ್ದರೂ ಅದರ ಬಗೆಗಿನ ಕೃತಜ್ಞತಾ ಭಾವವು ನಮ್ಮಲ್ಲಿ ಮಾನವೀಯ ಸೆಲೆಯನ್ನು ಹುಟ್ಟುಹಾಕುತ್ತದೆ” ಎಂದರು.

Advertisements

ತಮ್ಮ ತಂದೆ ತಾಯಿಯವರ ಹೆಸರಿನಲ್ಲಿ ಹುಲ್ಲಂಬಿ ಸರ್ಕಾರಿ ಶಾಲೆಯ ಏಳನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಇಬ್ಬರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ₹25,000 ಶಾಶ್ವತ ಠೇವಣಿಯನ್ನು ಮುಖ್ಯೋಪಾದ್ಯಾಯ‌ ದ್ಯಾವಪ್ಪವನವರ ಅವರಿಗೆ ಹಸ್ತಾಂತರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರಗಳಿಗೆ ಬೇಕಿದೆ ಪ್ರಥಮ ಚಿಕಿತ್ಸೆ

ಶಿವಪ್ಪ ಕುಡಬಾಯಿ, ಶಂಕ್ರಪ್ಪ ಸಾದರ, ಗುರುನಾಥ ಹರಿಜನ, ಶಿವಪ್ಪ ನೀರಲಕಟ್ಟಿ, ರಾಚಪ್ಪ ಬಿಸರಳ್ಳಿ, ಸ್ಕೋಪ್ ಸಂಸ್ಥೆಯ ಬಂಡೇರಾವ ಪಟವಾರಿ, ನಿಡಗುಂದಿ, ಬಸಪ್ಪ ಶೀಗಿಗಟ್ಟಿ, ಸಾವಕ್ಕ ಮನಗುಂಡಿ, ನಾಗಲಿಂಗ ಸಾದರ ಸೇರಿದಂತೆ ಅಪಾರ ಸಂಖ್ಯೆಯ ಗ್ರಾಮಸ್ಥರು, ಯುವಜನರು, ಮಕ್ಕಳು ಸಭೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X