ಧಾರವಾಡ | ಶಾಲಾ ಹಂತದಲ್ಲೇ ಮಕ್ಕಳಲ್ಲಿ ಪರಿಸರ ಪ್ರೀತಿ ಬೆಳೆಸಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು

Date:

Advertisements

ಮಾನವ ಕುಲದ ಆರೋಗ್ಯಕರ ಬದುಕಿಗೆ ಆಸರೆ ನೀಡಿ, ಪೋಷಿಸಿ, ಬೆಳೆಸುವ ಭೂಮಿ, ನೀರು ಸಸ್ಯಕಾಶಿ ಸೇರಿದಂತೆ ಎಲ್ಲ ರೀತಿಯ ಪರಿಸರದ ಬಗ್ಗೆ ಪ್ರೀತಿ, ಅಭಿಮಾನಗಳನ್ನು ಮಕ್ಕಳಲ್ಲಿ ಶಾಲಾ ಹಂತದಲ್ಲಿಯೇ ಬೆಳೆಸಬೇಕು. ಎಲ್ಲದಕ್ಕೂ ಮಿಗಿಲಾಗಿ ಪ್ರತಿ ಮಗುವಿನಲ್ಲಿ ನಾಗರಿಕ ಪ್ರಜ್ಞೆ ಮೂಡಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ, ಪರಿಸರ ಪ್ರಜ್ಞೆ ಬೆಳೆಸುವ ಅಗತ್ಯವಿದೆ. ಪರಿಸರ ಉಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಬೇಕು. ನಿಷೇಧಿತ ಪ್ಲಾಸ್ಟಿಕ್ ಉಪಯೋಗಿಸದಂತೆ ಎಲ್ಲೆಡೆ ಜನಜಾಗೃತಿ ಕಾರ್ಯ ಮಾಡಬೇಕು. ಭೂಮಿಯ ಮಣ್ಣು, ನೀರು, ಗಾಳಿ ಮತ್ತು ನೈಸರ್ಗಿಕ ಸಂಪನ್ಮೂಲಗಳು ಮಾಲಿನ್ಯ ಆಗದಂತೆ ಎಚ್ಚರಿಕೆ ವಹಿಸಬೇಕು. ಮಣ್ಣು, ನೀರು, ಗಾಳಿ ಆರೋಗ್ಯವಾಗಿದ್ದರೆ, ನಾವು ಆರೋಗ್ಯವಾಗಿರುತ್ತೇವೆ. ಅವು ಮಲಿನವಾಗದಂತೆ ನಾವೆಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು” ಎಂದು ತಿಳಿಸಿದರು.

“ಮನುಷ್ಯನ ಸ್ವಾರ್ಥಕ್ಕೆ ನೈಸರ್ಗಿಕ ಸಂಪನ್ಮೂಲಗಳು ಅತಿಯಾಗಿ ಬಳಕೆಯಾಗುತ್ತಿವೆ. ಅರಣ್ಯ ನಾಶ ತಡೆಗಟ್ಟಬೇಕು. ಹೆಚ್ಚು ಸಸಿಗಳನ್ನು ನೆಡಬೇಕು. ಪರಿಸರದ ಸಮತೋಲನ ಕಾಪಾಡಬೇಕು. ಪ್ರತಿ ಮನೆಯಲ್ಲಿ ಹಬ್ಬ ಹರಿದಿನಗಳು, ಹುಟ್ಟುಹಬ್ಬದ ದಿನಗಳು, ಕುಟುಂಬ ಕಾರ್ಯಕ್ರಮಗಳ ದಿನಗಳಂದು ಒಂದು ಸಸಿ ನೆಡುವ ಪರಂಪರೆ ಆರಂಭಿಸಬೇಕು. ಅರಣ್ಯ ಇಲಾಖೆಯಿಂದ ಕಳೆದ 2024 ನೇ ಸಾಲಿನಲ್ಲಿ 129 ಕಿ.ಮೀ ಪ್ರದೇಶದಲ್ಲಿ 42,886 ಸಸಿಗಳನ್ನು ನೆಡಲಾಗಿದೆ. 1,18,000 ಸಸಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಮಳೆಗಾಲದಲ್ಲಿ 762.5 ಹೆಕ್ಟೆರ್ ಪ್ರದೇಶದಲ್ಲಿ 2,67,574 ಸಸಿಗಳನ್ನು ನೆಡುವ ಮತ್ತು 239.826 ಹೆಕ್ಟೆರ್ ಅರಣ್ಯೇತರ ಪ್ರದೇಶದಲ್ಲಿ 86,‌800 ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರಿಗೆ ವಿತರಿಸಲು 1,05,967 ಸಸಿಗಳನ್ನು ಸಿದ್ದಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದರು.

Advertisements

ಇದನ್ನೂ ಓದಿ: ಧಾರವಾಡ | ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಶ್ರೀಶೈಲ್ ಕರಿಕಟ್ಟಿ ಸ್ವಾಗತಿಸಿದರು. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿ ಜಗದೀಶ ಐ.ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಚ್.ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಈ ವೇಳೆ ಸ್ಕೌಟ್ಸ್ ಮತ್ತು ಗೈಡ್ಸ್‍ದ ಜಿಲ್ಲಾ ಪದಾಧಿಕಾರಿಗಳಾದ ವಿ.ವಿ.ಕಟ್ಟಿ, ಬಸವರಾಜ ಕಡಕೋಳ, ಭಾಗೀರತಿ ತಲಕಾಂಬಕರ್, ಎಸ್.ಎನ್.ಸಾವಳಗಿ, ಎಂ.ವಿ. ಅಡಿವೆರ, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಎಸ್.ಎಂ.ಹುಡೇದಮನಿ, ಡಾ.ರೇಣುಕಾ ಅಮಲಜೇರಿ. ಎಸ್.ಎನ್.ಪೂಜಾರ್ ಸೇರಿದಂತೆ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X