ಧಾರವಾಡ | ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವುದು ಕಡ್ಡಾಯ

Date:

Advertisements

ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಸೂಚಿಸಿ, ಸುತ್ತೋಲೆ ಹೊರಡಿಸಿದ್ದಾರೆ.

ಅಕ್ಟೋಬರ 7 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಟೋಲ್‍ನಾಕ ಹತ್ತಿರದ ಮಹರ್ಷಿ ವಾಲ್ಮೀಕಿ ದೇವಸ್ಥಾನಕ್ಕೆ ಆಗಮಿಸಿ, ಮಾಲಾರ್ಪಣೆ ಮಾಡಲಾಗುತ್ತದೆ. ನಂತರ ಭಾವಚಿತ್ರದ ಮೆರವಣಿಗೆಯು ಟೋಲ್‍ನಾಕಾ, ಕೋರ್ಟ್ ಸರ್ಕಲ್, ಜುಬ್ಲಿ ಸರ್ಕಲ್ ಮಾರ್ಗವಾಗಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನಕ್ಕೆ ಬಂದು ಮುಕ್ತಾಯವಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಜಾತಿ, ಧರ್ಮಕ್ಕಿಂತಲೂ ದೇಶದ ಹಿತಾಸಕ್ತಿಯೇ ಮುಖ್ಯ: ಡಾ. ವೀಣಾ ಬಿರಾದಾರ

ನಂತರ ಜುಬ್ಲಿ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಲಾರ್ಪಣೆ ಮಾಡಲಾಗುವುದು. ನಂತರ ಡಾ.ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ವೇದಿಕೆ ಕಾರ್ಯಕ್ರಮ ಜರುಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X