ಧಾರವಾಡ | ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ: ನ್ಯಾ. ಪಿ.ಎಫ್.ದೊಡ್ಡಮನಿ

Date:

Advertisements

ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಪಾಲಕರು ನೆರವಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ಎಫ್ ದೊಡ್ಡಮನಿ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹುಬ್ಬಳ್ಳಿ-ಧಾರವಾಡ, ಕರ್ನಾಟಕ ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ, ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜ.29 ರಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗದವರಿಗೆ ಇರುವ ಸರ್ಕಾರದ ಸೌಲಭ್ಯಗಳ ಕುರಿತು ಧಾರವಾಡದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಆಧಾರಕಾರ್ಡ, ರೇಷನ್‍ಕಾರ್ಡ ಹಾಗೂ ಇತರ ಅಗತ್ಯ ಸೌಲಭ್ಯಗಳನ್ನು ಪಡೆಯಲು ಬೇಕಾದ ದಾಖಲಾತಿಗಳನ್ನು ಕಾಯ್ದುಕೊಳ್ಳುವುದು ಮತ್ತು ಅವುಗಳನ್ನು ಪಡೆಯಲು ತೊಂದರೆಯಿದ್ದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಳ್ಳಲು ಮುಂದಾಗಬೇಕು. ಧಾರವಾಡ ಜಿಲ್ಲೆಯಾದ್ಯಂತ ಇರುವ ಕೊಳಚೆ ಪ್ರದೇಶಗಳಲ್ಲಿ ಹಾಗೂ ಇತರ ಕೆಲವು ಸ್ಥಳಗಳಲ್ಲಿ ಸಮೀಕ್ಷೆ ಮಾಡುವ ಮೂಲಕ ಅತ್ಯಂತ ಸಮಸ್ಯೆಗಳ ಬಗ್ಗೆ ತಿಳಿದು ಚರ್ಚಿಸಲಾಗುತ್ತಿದೆ ಎಂದರು.

Advertisements

ಕಾರ್ಯಕ್ರಮದಲ್ಲಿ ತಹಶೀಲ್ದಾರ ಡಿ.ಹೆಚ್.ಹೂಗಾರ ಮಾತನಾಡಿ, ಸಮಾಜದಲ್ಲಿ ದುರ್ಬಲ ವರ್ಗದ ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕವಾದ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಜನರು ಇಂತಹ ಸೌಲಭ್ಯಗಳನ್ನು ಪಡೆದುಕೊಳ್ಳುವ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಮ್.ಡಿ.ಸನ್ನೇರ ಮಾತನಾಡಿ, ಸಿದ್ದೇಶ್ವರ ನಗರದ ಜನರು ಎದುರಿಸುತ್ತಿರುವ ಕೆಲವು ಮುಖ್ಯ ಮೂಲಭೂತ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ‌‌ | ಅಕ್ರಮ ಗಾಂಜಾ ಮಾರಾಟ : ನಾಲ್ವರ ಬಂಧನ

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಸುಡಗಾಡ ಸಿದ್ದರ ಮಾಹಾಸಂಘ ಉಪಾಧ್ಯಕ್ಷ ಲಕ್ಷ್ಮಣ ಡಿ. ಕರಿಯವರ, ಕರ್ನಾಟಕ ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ. ಸಂಗೀತಾ ಆರ್. ಮಾನೆ, ಸಮಾಜಕಾರ್ಯ ವಿಭಾಗದ ಬೋಧಕ ಸಿಬ್ಬಂದಿ ರಾಜವರ್ಧನ್, ತುಕಾರಾಮ್, ಡಾ. ರವೀಂದ್ರ. ಎಮ್., ಸಮಾಜ ಕಾರ್ಯಕರ್ತ ಅಶೋಕ ಕೋರಿ ಇತರರು ಉಪಸ್ಥಿತರಿದ್ದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು, ಅರೆ ಕಾನೂನು ಸ್ವಯಂ ಸೇವಕರು, ಸಿದ್ದೇಶ್ವರ ನಗರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರಾಜು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X