ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಆರೋಪಿಗಳು ತಲೆಮರೆಸಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.
ಗಿರೀಶ್ ಕರಡಿಗುಡ್ಡ ಎಂಬುವವರು ಹತ್ಯೆಯಾದ ವ್ಯಕ್ತಿ ಎಂದು ತಿಳಿದುಬಂದಿದ್ದು, ಇವರು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದೆ. ಮಂಗಳವಾರ ಸಾಯಂಕಾಲ ಮನೆಗೆ ವಾಪಸ್ ಬಂದ ಸಂದರ್ಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಮಳವಳ್ಳಿ | ಕನ್ನಡ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘ ಸದಾ ಸಕ್ರಿಯ: ಯೋಗಣ್ಣ
ಈ ಹತ್ಯೆಗೆ ಸಂಬಂಧಿಸಿದಂತೆ ಗ್ರಾಮಸ್ಥರಲ್ಲಿ ಆತಂಕವನ್ನುಂಟುಮಾಡಿದೆ. ಹತ್ಯೆ ಮಾಡಿದ ಆರೋಪಿಯು ತಲೆಮರೆಸಿಕೊಂಡಿದ್ದು, ಕೊಲೆಗಾರರನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಮುಂದಾಗಿದ್ದಾರೆ.
ಈ ಕುರಿತು ಗರಗ ಠಾಣೆಯ ಪೊಲೀಸ್ ಅಧಿಕಾರಿ ಮಾತನಾಡಿ, “ಕೊಲೆಯಾದ ಘಟನೆಯ ಬಗ್ಗೆ ಈಗಾಗಲೇ ತನಿಖೆ ನಡೆದಿದ್ದು, ಕೊಲೆಗಾರನ ಹುಡುಕಾಟದಲ್ಲಿದ್ದೇವೆ” ಎಂದರು. ಈ ಬಗ್ಗೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.