ಧಾರವಾಡ | ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗೆ 11 ವರ್ಷ ಜೈಲು, ₹55,000 ದಂಡ

Date:

Advertisements

ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗೆ ಎರಡನೇ ಅಧಿಕ ಧಾರವಾಡ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 11 ವರ್ಷ ಶಿಕ್ಷೆ ಪ್ರಕಟಿಸಿದೆ.

ಸಿದ್ದನಗೌಡ ಮರಿಲಿಂಗನಗೌಡರ ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತೆಯನ್ನು ಹೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಈತನಿಗೆ 11 ವರ್ಷ ಜೈಲು ವಾಸ ಹಾಗೂ ₹55,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಅಲ್ಲದೇ ಕಾನೂನು ನಿರ್ವಹಣಾ ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಹಾಗೂ ₹55,000 ದಂಡದಲ್ಲಿ ₹50,000ವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ನ್ಯಾಯಾಲಯ ಸೂಚಿಸಿದೆ.

ಧಾರವಾಡ ತಾಲೂಕಿನ ಸಲಕಿನಕೊಪ್ಪ ಹೊರವಲಯದಲ್ಲಿ 2022ರ ಜುಲೈ 5ರಂದು ಘಟನೆ ನಡೆದಿತ್ತು. ಅತ್ಯಾಚಾರ ಮಾಡಿದ್ದನ್ನು ಯಾರಿಗಾದರೂ ಹೇಳಿದರೆ ಪೆಟ್ರೋಲ್ ಸುರಿದು ಸಾಯಿಸುವುದಾಗಿ ಆರೋಪಿ ಬಾಲಕಿಯನ್ನು ಬೆದರಿಸಿದ್ದು, ಸತತ ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದ. ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಗ ನೋವು ಕಾಣಿಸಿಕೊಂಡಿತ್ತು. ಆರೋಪಿಗೆ ಶಿಕ್ಷೆಯಾಗುವ ಮೊದಲೇ ಬಾಲಕಿಗೆ ಹೆರಿಗೆಯಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ಜಿಲ್ಲಾಧಿಕಾರಿ ಪರಿಶೀಲನೆ

ಮಗುವಿನ ಡಿಎನ್ಎ ಪರೀಕ್ಷೆಯಲ್ಲಿ ಆರೋಪಿಯೇ ಮಗುವಿನ ಜೈವಿಕ ತಂದೆ ಎಂಬುದು ಸಾಬೀತಾಗಿದೆ. ಈ ಪ್ರಕರಣದಲ್ಲಿ ಆರೋಪಿ ಸಿದ್ದನಗೌಡ ಮತ್ತೋರ್ವನನ್ನು ಸಿಲುಕಿಸಲು ಯತ್ನಿಸಿದ್ದ. ಬಾಲಕಿಯ ಮುಂದೆ ನಿಂತು ಬೇರೊಬ್ಬನ ಹೆಸರು ಹೇಳುವಂತೆ ಮಾಡಿದ್ದನು. ಆದರೆ, ತನಿಖಾಧಿಕಾರಿಗಳ ಎದುರು ಬಾಲಕಿ ಸಿದ್ದನಗೌಡನ ಹೆಸರು ಹೇಳಿದ್ದಳು. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬಳಿಕ ನ್ಯಾಯಾಲಯದಲ್ಲಿ ನಡೆದ ವಾದ ಪ್ರತಿವಾದ ಆಲಿಸಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಶೈಲಾ ಅಂಗಡಿ ಬಾಲಕಿ ಪರವಾಗಿ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X