ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ.
ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೆಂದು ಗುರುತಿಸಲಾಗಿದೆ. ಮೃತ ಮಹೇಶ ಹಾವೇರಿ ಜಿಲ್ಲೆಯ ದುಂಡಸಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಸಂಶಿ ಗ್ರಾಮದಲ್ಲಿ ವಾಸವಾಗಿದ್ದರು.
ಬಹಳ ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮಹೇಶ ಇದರಿಂದ ಜಿಗುಪ್ಸೆಗೊಂಡು ಬೆಳಿಗ್ಗೆ 6ಗಂಟೆಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಪರಿಣಾಮ ಮಹೇಶ ದೇಹ ಎರಡು ತುಂಡಾಗಿದೆ. ಕುಂದಗೋಳ ಪೊಲೀಸರು ಸ್ಥಳಕ್ಕೆ ಭೆಟ್ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.