ಧಾರವಾಡ | ಮಾನ್ಯಾ ಹತ್ಯೆ ಪ್ರಕರಣ; ಪಾರದರ್ಶಕ ತನಿಖೆಯಾಗಲಿ: ಎ.ಆರ್.ಕೃಷ್ಣಮೂರ್ತಿ

Date:

ಯಾವುದೇ ರೀತಿಯ ಒತ್ತಡಗಳಿಗೆ ಒಳಗಾಗದೆ, ಧಾರವಾಡ ಜಿಲ್ಲೆಯ ಇನಾಂವೀರಾಪೂರ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ದಲಿತ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮತ್ತು ಆರೋಪಿತರಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಪಾರದರ್ಶಕವಾಗಿ ಕೆಲಸ ಮಾಡಬೇಕೆಂದು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ ಹೇಳಿದರು.

- Advertisement -

ಜ. 09ರ ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ನಡೆದ ದೌರ್ಜನ್ಯ ಪ್ರಕರಣದ ಕುರಿತು ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರೊಂದಿಗೆ ಕಂದಾಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿ, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಪೊಲೀಸ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ ಅವರು, ಯಾವುದೇ ರೀತಿಯ ಲೋಪವಾಗದಂತೆ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿನ ಬೆಲೆಗಾಗಿ ಮುಂದುವರೆದ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ದಲಿತ ಸಮುದಾಯದ ಮೇಲೆ ನಡೆದಿರುವ ಈ ರೀತಿಯ ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ದೊರಕುವಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವಂತೆ, ಅಗತ್ಯವಿರುವ ಎಲ್ಲ ರೀತಿಯ ಸಹಾಯ ಹಾಗೂ ರಕ್ಷಣೆ ಒದಗಿಸಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಹಾಗೂ ಸಾಮಾಜಿಕ ಸೌಹಾರ್ದತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಕರಣಗಳು ಕಂಡುಬಂದಲ್ಲಿ, ಪೊಲೀಸ್ ಇಲಾಖೆಯು ಅವುಗಳನ್ನು ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಗಮನಕ್ಕೆ ತರಬೇಕು. ಅಂತಹ ಪ್ರಕರಣಗಳ ಬಗ್ಗೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಿ, ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು. ಗ್ರಾಮಗಳಲ್ಲಿಯೂ ಹಾಗೂ ನಗರಗಳಲ್ಲಿಯೂ ಅಂತರ್ಜಾತಿ ವಿವಾಹಗಳ ಬಗ್ಗೆ ಜನರಿಗೆ ಅಗತ್ಯವಾದ ತಿಳುವಳಿಕೆ ನೀಡುವ ಮೂಲಕ ಜಾಗೃತಿ ಮೂಡಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಜಿಲ್ಲಾಡಳಿತವು ಸಮಗ್ರ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಡಾ. ಡಿ.ತಿಮ್ಮಯ್ಯ, ಹೇಮಲತಾ ನಾಯಕ, ಎಫ್.ಹೆಚ್.ಜಕ್ಕಪ್ಪನವರ, ಕೃಷ್ಣ ನಾಯಕ, ಡಾ. ಚಂದ್ರು ಲಮಾಣಿ, ಸಮೃದ್ಧಿ ವಿ.ಮಂಜುನಾಥ ಅವರು ಮಾತನಾಡಿದರು. ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಚರ್ಚಿಸಿ, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಪ್ರಕರಣಕ್ಕೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತವು ಕೈಗೊಂಡಿರುವ ಕ್ರಮಗಳು, ತನಿಖೆಯ ಪ್ರಗತಿ ಹಾಗೂ ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ನೆರವಿನ ಕುರಿತು ಮತ್ತು ಪರಿಹಾರದ ವಿವರಗಳನ್ನು ಸಮಗ್ರವಾಗಿ ವಿವರಿಸಿ, ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾತನಾಡಿ, ಪ್ರಕರಣದ ಹಿನ್ನೆಲೆ, ಆರೋಪಿಗಳ ಬಂಧನ, ಕಾನೂನು ಕ್ರಮಗಳು ಮತ್ತು ಸಂತ್ರಸ್ತ ಕುಟುಂಬಕ್ಕೆ ನೀಡಲಾಗಿರುವ ಭದ್ರತೆ ಕುರಿತು ವಿವರಿಸಿದರು. ವೇದಿಕೆಯಲ್ಲಿ ಕರ್ನಾಟಕ ವಿಧಾನ ಮಂಡಳದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯ ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಡಾ. ಡಿ. ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಸ್ವಾಗತಿಸಿದರು.

ಇದನ್ನೂ ಓದಿ ಹುಬ್ಬಳ್ಳಿ | ಮಹಿಳೆ ಮೇಲಿನ ಅತ್ಯಾಚಾರದ ವೀಡಿಯೋ ಪ್ರಕರಣ; ಮೂವರ ಬಂಧನ; ಕಮಿಷನರ್ ಹೇಳಿದ್ದೇನು?

ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಬೆಳಗಾವಿ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಗಡಾದ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಡಿವೈಎಸ್ಪಿ ವಿನೋದ ಮುಕ್ತೇದಾರ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಸಿ., ಡಿಎಚ್‍ಓ ಡಾ.ಎಸ್.ಎಂ.ಹೊನಕೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚನ್ನಣ್ಣವರ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅತೀಕಾ ಸಿದ್ದಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...