ಧಾರವಾಡ | ಗಾಂಜಾ ಮಾರಾಟ: ಹತ್ತು ಜನರ ಬಂಧನ

Date:

ಧಾರವಾಡದ ಲಕಮನಹಳ್ಳಿಯ ಹತ್ತಿರ ಹಾಗೂ ಹಳೇಹುಬ್ಬಳ್ಳಿಯ ಕೌದಿಮಠ ಹತ್ತಿರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತೊಡಗಿದ್ದ ಗಾಂಜಾ ಮಾರಾಟಗಾರರ (ಪೆಡ್ಲರ್) ಮೇಲೆ ದಾಳಿ ನಡೆಸಿ ಧಾರವಾಡದ ಲಕಮನಹಳ್ಳಿಯಲ್ಲಿ 05 ಜನ ಆರೋಪಿಗಳನ್ನು, ಹಳೇಹುಬ್ಬಳ್ಳಿಯ ಕೌದಿಮಠದ ಹತ್ತಿರ 05 ಜನ ಆರೋಪಿಗಳನ್ನು ಹುಬ್ಬಳ್ಳಿ ಧಾರವಾಡ ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಈ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಅಧಿಕಾರಿ ಹಾಗೂ ಸಿಬ್ಬಂದಿ ಜನರನ್ನು ಒಳಗೊಂಡ ತಂಡವು, ಹುಬ್ಬಳ್ಳಿ-ಧಾರವಾಡ ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಮಾದಕ ವಸ್ತು (ಡ್ರಗ್ಸ್) ಮಾರಾಟಗಾರರು ಮತ್ತು ಸೇವನೆ ಮಾಡುವವರ ವಿರುದ್ಧ ನಿಗಾ ವಹಿಸಿ, 15,000/- ರೂ ಮೌಲ್ಯದ 760 ಗ್ರಾಂ ಗಾಂಜಾ, 4 ಮೊಬೈಲ್‌ಗಳು, 2 ಬೈಕ್‌ಗಳು ಹಾಗೂ 20,750/- ರೂ ಮೌಲ್ಯದ 415 ಗ್ರಾಂ ಗಾಂಜಾ, 1700 ರೂ ನಗದು, 5 ಮೊಬೈಲ್‌ಗಳು, ಹೀಗೆ ಒಟ್ಟು ಎರಡು ಪ್ರಕರಣಗಳಲ್ಲಿ ಒಟ್ಟು 10 ಜನ ಆರೋಪಿತರನ್ನು ಬಂಧಿಸಿದ್ದು, ಒಟ್ಟು 68,450/- ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ವಿದ್ಯಾಗಿರಿ ಪೊಲೀಸ್ ರಾಣೆ ಹಾಗೂ ಕಸಬಾಪೇಟೆ ಪೊಲೀಸ್ ಠಾಣೆ ಸೇರಿ ಮೊಹಮ್ಮದ ಇಸಾಕ್, ಶ್ರೀಕಾಂತ ಅವರಂಗೆ, ಹನುಮಂತ ಹಾವೇರಿ, ಅಭಿಷೇಕ ದಾಸರ, ಆಸೀಫ್ ಹುಡೇದ, ಈರಣ್ಣ ಹಿರೇಮಠ, ಮಂಜುನಾಥ ಡಮರಿಕೊಪ್ಪ, ವಿಶಾಲ ನರಗುಂದಿ, ಅನಿಲ ನೆಲವಡಿ, ವಿಜಯ ಶೆಟ್ಟರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳೆಂದು ಗುರುತಿಸಲಾಗಿದೆ.

ಈ ಬಗ್ಗೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆ ಮತ್ತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಇನ್ನು ಈ ಬಗ್ಗೆ ಸಿಸಿಬಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯವೈಖರಿಯನ್ನು ಮಾನ್ಯ ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...