ಧಾರವಾಡ | ಕೃಷಿಕರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಕೃಷಿ ಮೇಳ ಯಶಸ್ವಿಯಾಗಲಿ: ಸಂತೋಷ್ ಲಾಡ್

Date:

ಕೃಷಿ ಮೇಳವು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳು, ನೂತನ ಬೆಳೆ ಪದ್ಧತಿಗಳು ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ಮಾಹಿತಿ ನೀಡುವ ಪ್ರಮುಖ ವೇದಿಕೆಯಾಗಿದೆ. ಕೃಷಿ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯ ಸಭಾ ಭವನದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಕೃಷಿ ಮೇಳದ ಕುರಿತು ಸಭೆ ಜರುಗಿಸಿ ಮಾತನಾಡಿದ ಅವರು, “ಕೃಷಿ ಮೇಳಕ್ಕೆ ಆಗಮಿಸುವ ರೈತರು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಮೇಳವನ್ನು ಅರ್ಥಪೂರ್ಣವಾಗಿ ಆಯೋಜಿಸಬೇಕು. ಮೇಳಕ್ಕೆ ಆಗಮಿಸುವ ರೈತರಿಗೆ, ಪ್ರಗತಿಪರ ರೈತರಿಗೆ ವಿಶೇಷ ಉಪನ್ಯಾಸಗಳ ಲಾಭ ಸಿಗಬೇಕು. ಮೇಳಕ್ಕೆ ಆಗಮಿಸುವ ಲಕ್ಷಾಂತರ ರೈತರಿಗೆ ಕೃಷಿ ಸುಧಾರಣೆ, ಅಭಿವೃದ್ಧಿ, ಉತ್ತಮ ಕೃಷಿ ಅಭ್ಯಾಸಗಳು ಗೊತ್ತಾಗಬೇಕು. ಅದರ ಲಾಭ ಎಲ್ಲರಿಗೂ ಸಿಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ಕೃಷಿ ಮೇಳವು ವಾಣಿಜ್ಯ ಚಟುವಟಿಕೆಗಳಿಗೆ, ವ್ಯಾಪರಗಳಿಗೆ ಸೀಮಿತವಾಗಬಾರದು. ಜನಜಂಗುಳಿ ಸೇರುವ ಜಾತ್ರೆಯಾಗದೇ ನಿಜವಾಗಿಯೂ ರೈತರ ಜಾತ್ರೆಯಾಗಿ ಕೃಷಿ ಮೇಳವು ಯಶಸ್ವಿಯಾಗುವಂತೆ ಮಾಡಬೇಕು. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಂದಾಜು 1 ಲಕ್ಷ ಹೇಕ್ಟೆರ್ ಬೆಳೆ ನಾಶವಾದ ವರದಿಯಾಗಿದೆ. ಈ ಕುರಿತು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ತಜ್ಞರು ಮತ್ತು ಕೃಷಿ ವಿದ್ಯಾರ್ಥಿಗಳು ಕ್ಷೇತ್ರ ಭೇಟಿ ಮೂಲಕ ರೈತರ ಜಮೀನುಗಳಿಗೆ ತೆರಳಿ, ಕಾರಣ ತಿಳಿದು ಅಧ್ಯಯನ ಮಾಡಬೇಕು. ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುವಲ್ಲಿ ವಿಶ್ವವಿದ್ಯಾಲಯ ಮುಖ್ಯ ಪಾತ್ರ ವಹಿಸಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, “ಈ ವರ್ಷದ ಕೃಷಿ ಮೇಳದ ವಿಭಿನ್ನ ಕಾರ್ಯಕ್ರಮಗಳನ್ನು, ರೈತರ ಉಪಯೋಗಿ ಉಪನ್ಯಾಸಗಳನ್ನು ಆಯೋಜಿಸಬೇಕು. ಮುಖ್ಯವಾಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಕುರಿತು ವೈಜ್ಞಾನಿಕ ಅಧ್ಯಯನವಾಗಬೇಕು. ಮತ್ತು ಮಾವು ವಿಮೆಯು ಎಲ್ಲ ರೈತರಿಗೆ ಸಕಾಲಕ್ಕೆ ಲಭಿಸುತ್ತಿಲ್ಲ. ವಿಮೆ ಪರಿಹಾರದ ಹಣ ವಿಮೆ ತುಂಬಿದ ಒಬ್ಬ ರೈತನಿಗೆ ದೊರೆತರೆ ಅದೇ ಪಕ್ಕದ ಗ್ರಾಮದ ರೈತರಿಗೆ ಮಾವು ವಿಮೆ ಸಿಗುತ್ತಿಲ್ಲ ಎಂಬ ದೂರಿದೆ. ಈ ಕುರಿತು ಸಮರ್ಪಕ ಅಧ್ಯಯನವಾಗಬೇಕು. ಉತ್ತರ ಕರ್ನಾಟಕ ವಿಶೇಷವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟ, ಗದಗ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿವೆ ಎಂಬ ವರದಿ ಇದೆ. ಸರ್ಕಾರ ಮತ್ತು ಜಿಲ್ಲಾಡಳಿತಗಳು ವಿವಿಧ ಇಲಾಖೆಗಳ ಮೂಲಕ ರೈತರಿಗೆ ಅಗತ್ಯ ತಿಳುವಳಿಕೆ, ಸಹಾಯ, ಪರಿಹಾರಗಳನ್ನು ನೀಡಲಾಗುತ್ತಿದೆ. ಆದರೂ ಯಾವ ಕಾರಣಕ್ಕಾಗಿ ಮತ್ತು ಸಾಮಾಜಿಕ, ಆರ್ಥಿಕ, ಇತರ ಕಾರಣಗಳ ಕುರಿತು ವೈಜ್ಞಾನಿಕ ಅಧ್ಯಯನವಾಗಬೇಕು. ಅನೇಕ ರೈತರು ಜಮೀನುಗಳಲ್ಲಿ ಬಿತ್ತಿದ ಬೀಜಗಳು ಮೊಳಕೆ ಒಡೆಯುತ್ತಿಲ್ಲ, ಇದಕ್ಕೆ ಪರಿಹಾರ ನೀಡುವಂತೆ ಕೋರುತ್ತಾರೆ. ಇಂತಹ ಸಂದರ್ಭಗಳಲ್ಲಿ ಸರ್ಕಾರದ ನೀತಿ ಯಾವ ರೀತಿ ಇರಬೇಕೆಂಬುವುದರ ಬಗ್ಗೆ ಹಿರಿಯ ವಿಜ್ಞಾನಿಗಳಿಂದ ಅಧ್ಯಯನವಾಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಧಾರವಾಡ | ಎಲ್‌ಇಡಿ ಬೀದಿದೀಪ ಯೋಜನೆಗೆ ಎಚ್‌ಡಿಎಂಸಿ ಅನುಮೋದನೆ

ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಎಲ್. ಪಾಟೀಲ ಮಾತನಾಡಿ, “ಕೃಷಿ ಮೇಳವನ್ನು ಸೆಪ್ಟೆಂಬರ್ 13 ರಿಂದ 16 ರವರೆಗೆ ಆಯೋಜಿಸಲಾಗಿದೆ. ಈ ವರ್ಷದ ಕೃಷಿ ಮೇಳವು ಆಹಾರದ ಪೋಷಕಾಂಶಗಳು ಮತ್ತು ಮಣ್ಣಿನ ಬಗ್ಗೆ ಹಾಗೂ ತಳಿಗಳ ಬಗ್ಗೆ ಕೃಷಿ ಸಂಸ್ಕರಣೆ ಎಂಬ ವಿಷಯದ ಮೇಲೆ ಕೇಂದ್ರೀಕರಿಸಲಿದೆ. ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಮಾರುಕಟ್ಟೆ ಅವಕಾಶಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಲಾಗುವುದು. ಆಧುನಿಕ ಕೃಷಿ ಉಪಕರಣಗಳ ಪ್ರದರ್ಶನ, ನೂತನ ಬೀಜಗಳ ಪರಿಚಯ, ಸಾವಯವ ಕೃಷಿ ಪದ್ಧತಿಗಳು ಮತ್ತು ಜಲಸಂಪನ್ಮೂಲಗಳ ಸಮರ್ಪಕ ಬಳಕೆ ಕುರಿತು ತಜ್ಞರಿಂದ ಮಾಹಿತಿ ನೀಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕ್ಯಾಂಟರ್ ವಾಹನಕ್ಕೆ ಬೆಂಕಿ: ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ತಾಲೂಕಿನ ಶಾಂತವೇರಿ ಘಾಟಿ ಪ್ರದೇಶದಲ್ಲಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಬೆಂಕಿ ಹೊತ್ತಿಕೊಂಡು...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ...

ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ...

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...