ಧಾರವಾಡ | ಪಾರದರ್ಶಕ ಬೆಳೆವಿಮೆ ಪರಿಹಾರಕ್ಕೆ ಚಿಂತನೆ: ಸಚಿವ ಸಂತೋಷ್ ಲಾಡ್

Date:

ರೈತರು ಬೆಳೆದಿದ್ದ ಬೆಳೆಗೆ ಹಾನಿ ಉಂಟಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ತಿಳಿಸಿದರು.

- Advertisement -

ಪ್ರಸಕ್ತ 2024 ನೇ ಸಾಲಿನ ಬೆಳೆವಿಮೆ ಕುರಿತಂತೆ ಜಿಲ್ಲೆಯ ವಿವಿಧ ಭಾಗಗಳ ರೈತ ಮುಖಂಡರ ಜೊತೆ ಧಾರವಾಡ ಜಿಲ್ಲಾಧಿಕಾರಿ ಸಭಾಭವನದಲ್ಲಿ ಸಭೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಭೆಯ ಅಧ್ಯಕ್ಷತೆ ವಹಿಸಿದ್ದ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಬೆಳೆ ಕಟಾವು ಮಾದರಿಗಳನ್ನು 2-3 ಪಟ್ಟು ಹೆಚ್ಚಿಸುವಲ್ಲಿ ಕ್ರಮಕೈಗೊಳ್ಳಲು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಲಾಭದ ದೃಷ್ಟಿಯಿಂದ ಅಸ್ತಿತ್ವದಲ್ಲಿರುವ ವಿಮಾ ಕಂಪನಿಗಳು ರೈತರ ಹಿತದೃಷ್ಟಿ ಕಾಯದೇ ಕೇವಲ ಲಾಭದತ್ತ ಕಾರ್ಯ ನಿರ್ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನ್ಯಾಯವಾಗದಂತೆ ವಿಮಾ ಕಂಪನಿಗಳಲ್ಲಿ ಬದಲಾವಣೆ ಬರಬೇಕಿದೆ. ರೈತರು ಸಹ ಇದಕ್ಕೆ ಪೂರಕವಾಗಿ ಒತ್ತಾಯ ಹಾಕಬೇಕು ಎಂದರು.

ಬೆಳೆಹಾನಿಯಾದಲ್ಲಿ ಸರಕಾರಿ ವಿಮಾ ಕಂಪನಿಗಳಿಂದಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದರೆಡು ದಿನಗಳಲ್ಲಿ ಅನುಭವಿ ಪರಿಣಿತ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.

ಕೆಲ ಪ್ರದೇಶಗಳಲ್ಲಿ ಒಂದೇ ತೆರನಾದ ಬೆಳೆ ಬೆಳೆಯುವಂತೆ ಹಾಗೂ ವಿಮೆ ಮಾಡಿಸುವಂತೆ ಕೆಲ ವ್ಯಕ್ತಿಗಳು ವಿಮಾ ಕಂಪನಿಗಳ ಜೊತೆಗೂಡಿ ಏಜೆಂಟರಂತೆ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ರೈತರು ಸಚಿವರ ಗಮನಕ್ಕೆ ತಂದರು. ಇಂಥವರ ಬಗ್ಗೆ ತೀವ್ರ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂತೋಷ್ ಲಾಡ್ ತಿಳಿಸಿದರು.

ಸಭೆಯಲ್ಲಿ ಎನ್.ಎಚ್.ಕೋನರೆಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ವೇದಿಕೆಯಲ್ಲಿ ಇದ್ದರು. ಸಭೆಯಲ್ಲಿ ಜಿಲ್ಲೆಯ ರೈತ ಮುಖಂಡರು ಬೆಳೆ ಕಟಾವು, ಬೆಳೆ ಹಾನಿ, ವಿಮಾ ಕಂಪನಿಗಳ ಅವೈಜ್ಞಾನಿಕ ಪದ್ಧತಿ, ಪರಿಹಾರ ವ್ಯತ್ಯಾಸ ಕುರಿತಂತೆ ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...